ಚಾಂಪಿಯನ್ಸ್ ಟ್ರೋಫಿ: ಭಾರತ-ಬೆಲ್ಜಿಯಂ ಪಂದ್ಯ ಡ್ರಾ

ಬ್ರೆಡ(ಹಾಲೆಂಡ್), ಜೂ.28: ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಮೆಂಟ್‌ನ ತನ್ನ 4ನೇ ಗ್ರೂಪ್ ಪಂದ್ಯದಲ್ಲಿ ಭಾರತ ತಂಡ ಬೆಲ್ಜಿಯಂ ವಿರುದ್ಧ 1-1 ರಿಂದ ಡ್ರಾ ಸಾಧಿಸಿದೆ.
ಗುರುವಾರ ನಡೆದ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಸಿಂಗ್ 10ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನ್ನು ಗೋಲಾಗಿ ಪರಿವರ್ತಿಸಿ ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು. 59ನೇ ನಿಮಿಷದಲ್ಲಿ ಗೋಲು ಬಾರಿಸಿದ ಲಾಕ್ ಲುಪಾರ್ಟ್ ಬೆಲ್ಜಿಯಂ 1-1 ರಿಂದ ಡ್ರಾ ಸಾಧಿಸಲು ನೆರವಾದರು.
ಭಾರತ ಶನಿವಾರ ನಡೆಯುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಹಾಲೆಂಡ್‌ನ್ನು ಎದುರಿಸಲಿದೆ. ಪಾಕ್ ಹಾಗೂ ಅರ್ಜೆಂಟೀನ ವಿರುದ್ಧ ಜಯ ಸಾಧಿಸಿರುವ ಭಾರತ ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಆಡುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ.
Next Story





