ಆಗುಂಬೆ ಘಾಟಿ ಕುಸಿತ...
ಉಡುಪಿ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ 7ನೇ ತಿರುವಿನಲ್ಲಿ ಘಾಟಿ ರಸ್ತೆಯ ಬದಿಯು ಗುರುವಾರ ಬೆಳಗ್ಗೆ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಘಾಟಿಯ ಏಳನೇ ತಿರುವಿನ ರಸ್ತೆ ಪಕ್ಕದ ತಡೆಗೋಡೆ ಕೂಡ ಕುಸಿದು ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆ ಹೆಬ್ರಿ ಪೊಲೀಸರು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕನ ನಡೆಸಿ ತುರ್ತು ಅಗತ್ಯ ಕ್ರಮಗಳನ್ನು ಕೈಗೊಂಡರು. ಪೊಲೀಸರು ಲಾರಿ, ಟಿಪ್ಪರ್ ಸಹಿತ ಘನ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದ್ದಾರೆ.
Next Story





