ಜೂ.30: ದ.ಕ. ಜಿಲ್ಲಾ ಕಾರ್ಯನಿರತರ ಸಂಘದಿಂದ ವನಮಹೋತ್ಸವ
ಮಂಗಳೂರು, ಜೂ.29: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜೂ.30ರಂದು ಬೆಳಗ್ಗೆ 10ಕ್ಕೆ ನಗರದ ಪತ್ರಿಕಾಭವನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ.ಕರಿಕ್ಕಳನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್, ತೋಟಗಾರಿಕೆ ಉಪನಿರ್ದೇಶಕ ಎಚ್. ಆರ್. ನಾಯ್ಕಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story