Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಲೇಜು ಪ್ರವೇಶಕ್ಕೆ ಮುನ್ನ ನಿಯಮಗಳನ್ನು...

ಕಾಲೇಜು ಪ್ರವೇಶಕ್ಕೆ ಮುನ್ನ ನಿಯಮಗಳನ್ನು ಒಪ್ಪಿ ಈಗ ವಿರೋಧಿಸುವುದು ಸರಿಯಲ್ಲ: ಪ್ರಾಂಶುಪಾಲೆ

ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ

ವಾರ್ತಾಭಾರತಿವಾರ್ತಾಭಾರತಿ29 Jun 2018 5:30 PM IST
share
ಕಾಲೇಜು ಪ್ರವೇಶಕ್ಕೆ ಮುನ್ನ ನಿಯಮಗಳನ್ನು ಒಪ್ಪಿ ಈಗ ವಿರೋಧಿಸುವುದು ಸರಿಯಲ್ಲ: ಪ್ರಾಂಶುಪಾಲೆ

ಮಂಗಳೂರು, ಜೂ. 29: ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ಹಲವು ವರ್ಷಗಳಿಂದ ವಸ್ತ್ರಸಂಹಿತೆಯ ನೀತಿ ಜಾರಿಯಲ್ಲಿದ್ದು, ಅದು ಈ ವರ್ಷ ರೂಪಿಸಿದ್ದೇನೂ ಅಲ್ಲ. ವಸ್ತ್ರಸಂಹಿತೆ ಸಹಿತ ಕಾಲೇಜಿನ ನೀತಿ ನಿಯಮಗಳನ್ನು ವಿದ್ಯಾರ್ಥಿ ಹಾಗೂ ಪೋಷಕರ ಗಮನಕ್ಕೆ ತರುವುದಕ್ಕಾಗಿಯೇ ಪ್ರತಿ ವರ್ಷವೂ ಕಾಲೇಜಿನ ಹ್ಯಾಂಡ್ ಬುಕ್‌ನಲ್ಲಿ ಪ್ರಕಟಿಸಲಾಗುತ್ತಿದೆ. ಅಲ್ಲದೆ ಕಾಲೇಜಿನ ಪ್ರವೇಶದ ಸಂದರ್ಭ ನೀತಿ ನಿಯಮಗಳನ್ನು ಒಪ್ಪಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಿ ಮಾಡುತ್ತಾರೆ. ಹೀಗಿರುವಾಗ ಪಿಎಫ್‌ಐ ಸಂಘಟನೆಯ ಜೊತೆ ಸೇರಿ ಕೆಲವು ವಿದ್ಯಾರ್ಥಿನಿಯರು ಪ್ರತಿಭಟಿಸುವುದು ಮತ್ತು ನಿಯಮಗಳನ್ನು ವಿರೋಧಿಸುವುದು ಸರಿಯಲ್ಲ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ಜೆಸ್ವಿನಾ ಹೇಳಿದರು.

ಶುಕ್ರವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಲೇಜಿನ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿನಿಯರು ಕಾಲೇಜು ಸಮವಸ್ತ್ರವನ್ನು ಧರಿಸಬೇಕು ಮತ್ತು ಅದಕ್ಕೆ ಹೊರತಾದ ಬೇರೆ ಯಾವುದೇ ಉಡುಗೆ ತೊಡುಗೆಯನ್ನು ಧರಿಸಬಾರದು. ಯಾವುದೇ ವಿದ್ಯಾರ್ಥಿನಿ ಸ್ಕಾರ್ಫ್ ಧರಿಸುವಂತಿಲ್ಲ. ಮುಖವನ್ನು ಮುಚ್ಚಿಕೊಳ್ಳುವಂತಿಲ್ಲ. ಸಮವಸ್ತ್ರಕ್ಕೆ ಹೊರತಾದ ಬೇರೆ ಯಾವುದೇ ಉಡುಗೆಯನ್ನು ತರಗತಿಯಲ್ಲಿ ತೊಡುವಂತಿಲ್ಲ. ಇದನ್ನು ಹ್ಯಾಂಡ್‌ಬುಕ್‌ನಲ್ಲಿ ಸ್ಪಷ್ಟಪಡಿಸಲಾಗಿದ್ದು, ಪಾಲಿಸುವುದು ವಿದ್ಯಾರ್ಥಿನಿಯರ ಕರ್ತವ್ಯವಾಗಿದೆ ಎಂದರು.

ಶಿಕ್ಷಣಕ್ಕಾಗಿ ಈ ಕಾಲೇಜನ್ನು ಆಯ್ಕೆ ಮಾಡಿಕೊಂಡ ಪ್ರತಿಯೊಬ್ಬ ವಿದ್ಯಾರ್ಥಿನಿಯನ್ನೂ ಸಂಸ್ಥೆ ಗೌರವಿಸುತ್ತದೆ. ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿನಿಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಸಮಾಜದ ಎಲ್ಲಾ ವರ್ಗದವರೊಂದಿಗೆ ಅನ್ಯೋನ್ಯತೆಯಿಂದ ಬಾಳಿ ಸೌಹಾರ್ದಯುತ ಸಂಬಂಧ ಬೆಳೆಸಲು ಸಂಸ್ಥೆ ಬಯಸುತ್ತದೆ ಎಂದ ಪ್ರಾಂಶುಪಾಲೆ ಡಾ.ಎಂ. ಜೆಸ್ವಿನಾ, ಕಾಲೇಜಿನ ಪ್ರಾಧ್ಯಾಪಕರು ಯಾವುದೇ ಸಂದರ್ಭದಲ್ಲೂ ಕೂಡಾ ಯಾವುದೇ ವಿದ್ಯಾರ್ಥಿನಿಯರ ಸ್ಕಾರ್ಪ್ ಎಳೆದಿಲ್ಲ. ಈ ಘಟನೆ ಬಳಿಕ ಯಾವುದೇ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತು ಮಾಡಿಲ್ಲ. ಜೂನ್ 25ರಂದು ಕಾಲೇಜಿನ ಗೇಟಿನ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ಮತ್ತು ಅಂದು ಮಾಧ್ಯಮದ ಮುಂದೆ ಮಾತನಾಡಿದ ತೃತೀಯ ಬಿಕಾಂ ವಿದ್ಯಾರ್ಥಿನಿ ಫಾತಿಮಾ ಅನೀಸ್ ಮರುದಿನದಿಂದಲೇ ಕಾಲೇಜು ನಿಗದಿಪಡಿಸಿದ ಸಮವಸ್ತ್ರದೊಂದಿಗೆ ಎಲ್ಲಾ ತರಗತಿಗಳಿಗೂ ಹಾಜರಾಗುತ್ತಿದ್ದಾರೆ. ಕಾಲೇಜಿನ ನಿಯಾಮಾವಳಿಗಳ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿನಿಯರಿಂದ ಅವರ ಹೆತ್ತವರ ಸಮ್ಮುಖದಲ್ಲಿ 3 ದಿನಗಳೊಳಗೆ ಲಿಖಿತ ಸ್ಪಷ್ಟನೆಯನ್ನು ನೀಡಬೇಕೆಂದು ಸೂಚಿಸಲಾಗಿತ್ತೇ ಹೊರತು ಕಾಲೇಜಿನ ಪ್ರಾಂಶುಪಾಲೆಯಾಗಿ ನಾನು ಅಥವಾ ಯಾವುದೇ ಪ್ರಾಧ್ಯಾಪಕರು ಖಾಲಿ ಕಾಗದದ ಮೇಲೆ ವಿದ್ಯಾರ್ಥಿನಿಯರ ಸಹಿ ಪಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ತರಗತಿಯೊಳಗೆ ಸ್ಕಾರ್ಫ್ ಹಾಕದಂತೆ ಸೂಚಿಸಲಾಗಿದೆಯೇ ವಿನಃ ಕಾಲೇಜಿನ ಆವರಣದೊಳಗೆ ಸ್ಕಾರ್ಫ್ ಅಥವಾ ಬುರ್ಖಾ ಧರಿಸಲು ವಿರೋಧಿಸಿಲ್ಲ. ಆದರೆ ಕೆಲವು ಸಾಮಾಜಿಕ ಜಾಲತಾಣದಲ್ಲಿ ಸಂಸ್ಥೆಯ ವಿರುದ್ಧ ಸಂದೇಶ ಹರಿದು ಬಿಡಲಾಗುತ್ತದೆ. ಇದರಲ್ಲಿ ಸತ್ಯಾಂಶವಿಲ್ಲ. ಕೆಲವರು ತಿಳಿಸಿದಂತೆ ನಮ್ಮಲ್ಲಿ ಶೇ.80ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರಿಲ್ಲ. ಬದಲಾಗಿ ಶೇ.28ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಅಲ್ಲದೆ ಸುಮಾರು 100 ವಿದ್ಯಾರ್ಥಿನಿಯರಿಗೆ ಅಂದಾಜು 2 ಲಕ್ಷ ರೂ. ರಿಯಾಯಿತಿ ನೀಡಲಾಗಿದೆ ಎಂದು ಪ್ರಾಂಶುಪಾಲೆ ಡಾ. ಎಂ. ಜೆಸ್ವಿನಾ ಹೇಳಿದರು.

ಕಾಲೇಜಿನ ನೀತಿ ನಿಯಮಗಳಿಗೆ ಒಪ್ಪಿಕೊಂಡು ಯಾರೇ ಆದರೂ ತರಗತಿಗೆ ಪ್ರವೇಶ ಪಡೆಯಬಹುದು. ನಿಯಮಗಳಿಗೆ ಬದ್ಧರಾಗದವರು ತಮಗೆ ಬೇಕಾದ ಶಿಕ್ಷಣ ಸಂಸ್ಥೆಗೆ ಸೇರ್ಪಡೆಗೊಳ್ಳಬಹುದು. ಅದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಮೊನ್ನೆ ನಡೆದ ಪ್ರತಿಭಟನೆಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಲ್ಲದೆ, ಹೊರಗಿನ ವಿದ್ಯಾರ್ಥಿನಿಯರೂ ಪಾಲ್ಗೊಂಡಿರುವ ಸಾಧ್ಯತೆ ಇದೆ. ಹಾಗಾಗಿ ಕಾಲೇಜಿನ ಮುಂದೆ ಪ್ರತಿಭಟಿಸಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ ಸಿಎಫ್‌ಐ ಸಂಘಟನೆಯ ವಿರುದ್ಧ ದೂರು ನೀಡುವ ಬಗ್ಗೆ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಜೊತೆ ಕಾರ್ಯದರ್ಶಿ ಡಾ. ಮರಿಯಾ ರೂಪಾ, ಉಪ ಪ್ರಾಂಶುಪಾಲೆ ಡಾ. ವೆನಿಸ್ಸಾ, ರಿಜಿಸ್ಟ್ರಾರ್ ಚಾರ್ಲ್ಸ್ ಸ್ಟಾನಿ ಪಾಯ್ಸಾ, ಶಿಸ್ತು ಸಮಿತಿಯ ಸಂಯೋಜಕಿ ಡಾ. ದೇವಿ ಪ್ರಭಾ ಆಳ್ವ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ನೀನಾ, ಹಳೆ ವಿದ್ಯಾರ್ಥಿನಿ ನಯನಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X