Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಶಾಲನಗರದ ಬದಲು ಬ್ರಿಟಿಷ್ ಅಧಿಕಾರಿಯ...

ಕುಶಾಲನಗರದ ಬದಲು ಬ್ರಿಟಿಷ್ ಅಧಿಕಾರಿಯ ಹೆಸರಿಡಲು ಸಿಎನ್‍ಸಿ ಆಗ್ರಹ !

ವಾರ್ತಾಭಾರತಿವಾರ್ತಾಭಾರತಿ29 Jun 2018 6:19 PM IST
share
ಕುಶಾಲನಗರದ ಬದಲು ಬ್ರಿಟಿಷ್ ಅಧಿಕಾರಿಯ ಹೆಸರಿಡಲು ಸಿಎನ್‍ಸಿ ಆಗ್ರಹ !

ಮಡಿಕೇರಿ, ಜೂ.29: ಪುತ್ರ ಟಿಪ್ಪು ಜನಿಸಿದ ಸುವಾರ್ತೆ ದೊರೆತ ಹಿನ್ನೆಲೆಯಲ್ಲಿ ಕಾವೇರಿ ನದಿತಟದಲ್ಲಿರುವ ದಂಡಿನಪೇಟೆಯಲ್ಲಿ ತನ್ನ ಸೇನಾ ತುಕ್ಕಡಿಯೊಂದಿಗೆ ಬೀಡು ಬಿಟ್ಟಿದ್ದ ಹೈದರಾಲಿ ಸಂಭ್ರಮದಿಂದ ಆ ಪ್ರದೇಶವನ್ನು ಕುಶಾಲನಗರವೆಂದು ನಾಮಕರಣ ಮಾಡಿದ್ದು, ‘ಕುಷ್’ ಎಂದರೆ ಪರ್ಷಿಯನ್ ಭಾಷೆಯಲ್ಲಿ ಸಂಭ್ರಮ ಎಂದರ್ಥ ಎಂದು ಅಭಿಪ್ರಾಯಪಟ್ಟಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷರಾದ ಎನ್.ಯು.ನಾಚಪ್ಪ ಕುಶಾಲನಗರ ಪಟ್ಟಣದ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇವಟ್‍ಪರಂಬುವಿನ ನರಮೇಧಕ್ಕೆ ಕಾರಣನಾದ ಟಿಪ್ಪು ಸುಲ್ತಾನನನ್ನು ನೆನಪಿಸುವ, ‘ಕುಶಾಲನಗರ’ ಪಟ್ಟಣದ ಹೆಸರನ್ನು ತೆಗೆದುಹಾಕಿ ಫ್ರೇಜರ್ ಪೇಟೆ ಅಥವಾ ಸಮರವೀರ ಕುಲ್ಲೇಟಿರ ಪೊನ್ನಣ್ಣನವರ ಹೆಸರನ್ನು ಮರುನಾಮಕರಣ ಮಾಡಬೇಕೆಂದು ಆಗ್ರಹಿಸಿದರು.

 ಕೊಡಗಿನ ರಾಜರ ಆಳ್ವಿಕೆಗೆ ಕೊನೆಹಾಡಿ, ಕೊಡವ ಬುಡಕಟ್ಟು ಕುಲದ ಆತ್ಮಗೌರವವನ್ನು ಕಾಪಾಡಿದ ಹಾಗೂ 1835 ರಲ್ಲಿ ರಾಷ್ಟ್ರದಲ್ಲೆ ಪ್ರಥಮ ಬಾರಿಗೆ ಕೊಡಗಿನಲ್ಲಿ ಕೊಡವರ ಧಾರ್ಮಿಕ ಭಾವನೆಗಳಿಗೆ ಪೂರಕವಾದ ಗೋವುಗಳ ವಧೆಯನ್ನು ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಿದ ಜೆ.ಎಸ್.ಫ್ರೇಜರ್ ಅವರ ಹೆಸರನ್ನು ಈ ಪ್ರದೇಶಕ್ಕೆ ಇಡಲಾಗಿತ್ತು. ಆದರೆ, 1956 ರಲ್ಲಿ ವಿಶಾಲ ಮೈಸೂರು ಕರ್ನಾಟಕದೊಂದಿಗೆ ವಿಲೀನಗೊಂಡ ಬಳಿಕ ಫ್ರೇಜರ್‍ಪೇಟೆ ಹೆಸರನ್ನು ಕುಶಾಲನಗರವೆಂದು ಬದಲಾಯಿಸಲಾಯಿತೆಂದು ಬೇಸರ ವ್ಯಕ್ತಪಡಿಸಿದರು.

ಟಿಪ್ಪುವನ್ನು ನೆನಪಿಸುವ ಕುಶಾಲನಗರ ಹೆಸರಿಗೆ ಬದಲಾಗಿ ಬ್ರಿಟಿಷ್ ಅಧಿಕಾರಿ ಫ್ರೇಜರ್ ಹೆಸರನ್ನು ಇಡುವುದು ಒಪ್ಪಿತವಾಗದಿದ್ದಲ್ಲಿ, ಕೊಡಗಿನ ಮೇಲೆ ನಿರಂತರ ದಾಳಿ ನಡೆಸಿದ್ದ ಹೈದರ್ ಮತ್ತು ಟಿಪ್ಪುವನ್ನು ತಮ್ಮ ಸೈನ್ಯದ ಮೂಲಕ ಹಿಮ್ಮೆಟ್ಟಿಸಿದ್ದ, ಅಂದಿನ ಕೊಡಗು ರಾಜ್ಯದ ದಂಡನಾಯಕ ಕುಲ್ಲೇಟಿರ ಪೊನ್ನಣ್ಣ ಅವರ ಹೆಸರನ್ನು ಮರು ನಾಮಕರಣ ಮಾಡುವಂತೆ ನಾಚಪ್ಪ ಒತ್ತಾಯಿಸಿದರು.

ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿನ ಔರಂಗಜೇಬ್ ರಸ್ತೆಯನ್ನು ಮಾರ್ಪಡಿಸಿ ಡಾ. ಅಬ್ದುಲ್ ಕಲಾಂ ರಸ್ತೆಯೆಂದು ಹಾಗೂ ಅಕ್ಬರ್ ರಸ್ತೆಯನ್ನು ಬದಲಿಸಿ ಮಹಾರಾಣಾ ಪ್ರತಾಪ ರಸ್ತೆಯೆಂದು ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಸರ್ಕಾರ ಮಾರ್ಪಡಿಸಿರುವುದು ಸ್ವಾಗತಾರ್ಹ. ಅದೇ ರೀತಿ ಕೊಡಗಿನಲ್ಲಿ ಟಿಪ್ಪುವಿನ ದುಷ್ಕೃತ್ಯಗಳನ್ನು ನೆನಪಿಸುವ ಕುಶಾಲನಗರ ಹೆಸರನ್ನು ತೆಗೆದು ಮರುನಾಮಕರಣ ಮಾಡುವುದು ಸೂಕ್ತವೆಂದು ತಿಳಿಸಿದರು.

 ತಮ್ಮ ಬೇಡಿಕೆಯ ಮನವಿ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಹಲವು ಪ್ರಮುಖರಿಗೆ ಕಳುಹಿಸಿಕೊಟ್ಟಿರುವುದಾಗಿ ನಾಚಪ್ಪ ತಿಳಿಸಿದರು. ಕುಶಾಲನಗರ ಪಟ್ಟಣದ ಹೆಸರು ಬದಲಾವಣೆ ಆಗದೇ ಇದ್ದಲ್ಲಿ ಶಾಂತಿಯುತ ಹೋರಾಟವನ್ನು ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು,

 ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸುವ ಸಂದರ್ಭ ಕಲಿಯಂಡ ಪ್ರಕಾಶ್, ಮೂಕೊಂಡ ದಿಲೀಪ್, ಮಂದಪಂಡ ಮನೋಜ್, ಕಿರಿಯಮಾಡ ಶರೀನ್, ಚಂಬಾಂಡ ಜನತ್ ಹಾಗೂ ಅರೆಯಡ ಗಿರೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X