ಕೆಎಸ್ಸಾರ್ಟಿಸಿ ಬಸ್- ಕಾರು ಢಿಕ್ಕಿ; ಚಾಲಕ ಗಂಭೀರ

ಚಿಕ್ಕಮಗಳೂರು, ಜೂ.29: ಕೆಎಸ್ಸಾರ್ಟಿಸಿ ಬಸ್ ಹಾಗೂ ಮಾರುತಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಗಾಂಧಿಘರ್ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೂಡಿಗೆರೆಯಿಂದ ಬೇಲೂರಿನತ್ತ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗಾಂಧಿಘರ್ ಎಂಬಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಚಾಲಕನನ್ನು ಸಾರ್ವಜನಿಕರು ಹರಸಾಹಸಪಟ್ಟು ಹೊರ ತೆಗೆದಿದ್ದಾರೆ. ಗಾಯಗೊಂಡ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಚಾಲಕನ ಗುರುತು ಪತ್ತೆಯಾಗಿಲ್ಲ.
ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Next Story





