ತುಮಕೂರು : ಜಿಲ್ಲೆಗೆ ಹೇಮಾವತಿ ನೀರನ್ನು ಹರಿಸಲು ಸಿಎಂಗೆ ಸಂಸದರ ಒತ್ತಾಯ

ತುಮಕೂರು,ಜೂ.29:ಲೋಕಸಭಾ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ ನೇತೃತ್ವದ ಸಂಸದರ ತಂಡ ಗುರುವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತುಮಕೂರು ಜಿಲ್ಲೆಗೆ ತಕ್ಷಣವೇ ಹೇಮಾವತಿ ನೀರನ್ನು ಹರಿಸಲು ಹಾಗೂ ರಾಜ್ಯದ ತೆಂಗು ಬೆಳೆಗಾರರಿಗೆ ಪರಿಹಾರ ನೀಡಲು ಒತ್ತಾಯಿಸಿದರು.
ಮುಖ್ಯಮಂತ್ರಿಗಳು ಸಂಸದರ ಒತ್ತಾಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ನೀರು ಹರಿಸುವ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದ್ದಾರೆ.
ತದ ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಸಂಸದರು ನೀರು ಬಿಡುಗಡೆಗೆ ಆದೇಶ ನೀಡುವಂತೆ ಒತ್ತಾಯಿಸಿದರು. ಸಂಸದರಾದ ಚಂದ್ರಪ್ಪ, ಡಿ.ಕೆ.ಸುರೇಶ್ ಮತ್ತಿತರರು ಜೊತೆಗಿದ್ದರು
Next Story





