Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಂದಾವರ: ಚೈಲ್ಡ್‌ಲೈನ್-1098 ಕುರಿತು...

ನಂದಾವರ: ಚೈಲ್ಡ್‌ಲೈನ್-1098 ಕುರಿತು "ತೆರೆದ ಮನೆ’" ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Jun 2018 8:10 PM IST
share
ನಂದಾವರ: ಚೈಲ್ಡ್‌ಲೈನ್-1098 ಕುರಿತು ತೆರೆದ ಮನೆ’ ಕಾರ್ಯಕ್ರಮ

ಬಂಟ್ವಾಳ, ಜೂ. 29: ಚೈಲ್ಡ್‌ಲೈನ್-1098 ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು "ತೆರೆದ ಮನೆ’" ಎಂಬ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನಂದಾವರ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜರುಗಿತು.

ಚೈಲ್ಡ್‌ಲೈನ್‌ನ ಭಿತ್ತಿ ಪತ್ರವನ್ನು ಪ್ರದರ್ಶಿಸಿ ಉದ್ಘಾಟಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯ ಪಿಎಸ್ಸೈ ಸೌಮ್ಯ ಜೆ. ಮಾತನಾಡಿ, ಈ ಕಾರ್ಯಕ್ರಮದಲ್ಲಿ ‘ತಲೆ ಬಗ್ಗಿಸಿ ನನ್ನನ್ನು ಓದು, ತಲೆ ಎತ್ತಿ ನಡೆಯುವಂತೆ ಮಾಡುತ್ತೇನೆ’ ಎಂದು ಗ್ರಂಥ ಹೇಳುತ್ತದೆ, ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು, ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು, ಇದರಿಂದ ಮಕ್ಕಳ ಭೌದ್ಧಿಕ ಮಟ್ಟ ಹೆಚ್ಚುವುದಲ್ಲದೇ, ಜ್ಞಾನರ್ಜನೆಯಾಗುತ್ತದೆ. ಸಾಧಿಸುವ ಛಲ, ಉನ್ನತ್ತ ಗುರಿಯನ್ನಿಟ್ಟುಕೊಳ್ಳಬೇಕು. ಮಕ್ಕಳಲ್ಲಿ ಕನಸುಗಳು ಇರಬೇಕು. ಕನಸುಗಳು ನಮ್ಮನ್ನು ಗುರಿಯೆಡೆಗೆ ಕೊಂಡೊಯ್ಯುತ್ತದೆ ಎಂದರು.

ಕಂಟ್ರೋಲ್ ರೂಮ್-100 ಕುರಿತು ಮಾಹಿತಿ ನೀಡಿದ ಅವರು, ಮಕ್ಕಳು, ಮಹಿಳೆಯರು ಭಯಮುಕ್ತರಾಗಿ ನೇರವಾಗಿ ಸ್ಥಳೀಯ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದರು. ಹುಟ್ಟಿನಿಂದ ಹಾಗೂ ಮಕ್ಕಳ ಬೆಳವಣಿಗೆಯಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳಿಗೆ ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಿರಂತರ ತಪಾಸಣೆ ನಡೆಸಲಾಗುತ್ತಿದ್ದು, ರೋಗ ಲಕ್ಷಣಗಳನ್ನು ವಿವರಿಸಿ, ಚಿಕಿತ್ಸೆಗೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯಲ್ಲಿ ಮತ್ತು ಆರೋಗ್ಯ ಕರ್ನಾಟಕ ಕಾರ್ಡ್ ಮೂಲಕ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಹಾಗೂ ಆಯ್ದ ಖಾಸಾಗಿ ಆಸ್ಪತ್ರೆಗಳಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಆರೋಗ್ಯ ಇಲಾಖೆ ಆರ್.ಬಿ.ಎಸ್.ಕೆ ವಿಭಾಗದ ವೈದ್ಯಾಧಿಕಾರಿ ಡಾ. ಹೇಮಾ ಪ್ರಭಾ ಮಾಹಿತಿ ನೀಡಿದರು.

ಸರಕಾರದಿಂದ ಮಕ್ಕಳಿಗಿರುವ ಸವಲತ್ತುಗಳು, ಪೋಷಕತ್ವ ಸಹಾಯ ಧನ, ಮಗು ದತ್ತು ಪಡೆಯುವ ಬಗ್ಗೆ, ಬಾಲ್ಯವಿವಾಹ, ಬಾಲ ನ್ಯಾಯ ಕಾಯ್ದೆ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್ ಶೆಟ್ಟಿಗಾರ್, ಆರೋಗ್ಯ ಇಲಾಖೆಯ ಸವಲತ್ತು ಕುರಿತು ಆರೋಗ್ಯ ಇಲಾಖೆಯ ಪಿ.ಪಿ.ಜಲಜಾಕ್ಷಿ ಮಾಹಿತಿಯನ್ನು ನೀಡಿದರು.

ಚೈಲ್ಡ್‌ಲೈನ್-1098 ನಗರ ಸಂಯೋಜಕ ಯೋಗೀಶ್ ಮಲ್ಲಿಗೆಮಾಡು ಪ್ರಸ್ತಾವಿಕವಾಗಿ ಮಾತನ್ನಾಡಿದರು, ಚೈಲ್ಡ್‌ಲೈನ್‌ನ-1098ನ ಜಯಂತಿ ಕೋಕಳ, ರೇವತಿ ಹೊಸಬೆಟ್ಟು, ಕೀರ್ತೀಶ್ ಕಲ್ಮಕಾರು ಗುಂಪು ಚರ್ಚೆಯನ್ನು ನಡೆಸಿದರು. ಮುಖ್ಯೋಪಧ್ಯಾಯ ಹರೀಶ್ ಕುಮಾರ್.ಬಿ.ಎಂ. ಸ್ವಾಗತಿಸಿ, ಶಿಕ್ಷಕ ಪ್ರಾನ್ಸಿಸ್ಸ್ ಡೇಸಾ ವಂದಿಸಿ, ನಾಗರಾಜ್ ಪಣಕಜೆ ನಿರೂಪಿಸಿದರು.

 ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಕರೀಂ, ಪ್ರೌಢ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲಕೃಷ್ಣ ಆಚಾರ್ಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಬ್ರಾಹಿಂ.ಎ, ಮುಖ್ಯಶಿಕ್ಷಕ ಹರೀಶ್ ಕುಮಾರ್ ಬಿ.ಎಂ. ಪ್ರೌಢ ಶಾಲಾ ಮುಖ್ಯಶಿಕ್ಷಕ ಉದಯ ಕುಮಾರ್, ಆರೋಗ್ಯ ಇಲಾಖೆಯ ಆರ್.ಬಿ.ಎಸ್.ಕೆ ಡಾ. ಮುಹಮ್ಮದ್ ಮುಕ್ತಾಫ್, ಚೈಲ್ಡ್‌ಲೈನ್ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ, ಆಪ್ತಸಮಾಲೋಚಕಿ ರೇಖಾ ಶ್ರೀನಿವಾಸ್ ನರೂರ್, ಚೈಲ್ಡ್‌ಲೈನ್‌ನ ಆಶಾಲತಾ, ಅಸುಂತಾ, ಪೊಲೀಸ್ ಇಲಾಖೆಯ ವಿಶಾಲಾಕ್ಷಿ ಕೆ. ಮತ್ತು ಹನುಮಂತ ಟಿ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X