ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಢಿಕ್ಕಿ : ಸವಾರ ಮೃತ್ಯು
ಮೈಸೂರು,ಜೂ.29: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ನಗರದ ಇರ್ವಿನ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಸನತ್ ರಾವ್ ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರ ಜಯಾಸಿಂಗ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇರ್ವಿನ್ ರಸ್ತೆಯಲ್ಲಿ ಜೆ.ಕೆ.ಮೈದಾನದ ಜಂಕ್ಷನ್ ಬಳಿ ಹೋಗುತ್ತಿದ್ದ ದ್ವಿಚಕ್ರವಾಹನಕ್ಕೆ ದಿವಾನ್ ಶೇಷಾದ್ರಿ ಅಯ್ಯರ್ ರಸ್ತೆಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಕ್ಯಾಂಟರ್ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಎನ್.ಆರ್.ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story