ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು
ಮೈಸೂರು,ಜೂ.29: ವಿದ್ಯುತ್ ಸ್ಪರ್ಶಿಸಿ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗೀತಾ (30) ಎಂದು ಗುರುತಿಸಲಾಗಿದ್ದು, ವಾಟರ್ ಟ್ಯಾಂಕ್ ನಿಂದ ಮೋಟಾರ್ ಮೂಲಕ ನೀರನ್ನು ಪಂಪ್ ಮಾಡುವ ವೇಳೆ ಘಟನೆ ನಡೆದಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ತುಂಡಾದ ಮೋಟಾರ್ ವೈರನ್ನು ಸರಿಪಡಿಸುವ ವೇಳೆ ದುರ್ಘಟನೆ ನಡೆದಿದ್ದು, ಅಸ್ವಸ್ಥರಾದ ಗೀತಾರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story