ಸುಮೋ ಜೀಪು ಢಿಕ್ಕಿ: ಬೈಕ್ ಸವಾರ ಮೃತ್ಯು
ಕೋಟ, ಜೂ.29: ಐರೋಡಿ ಗ್ರಾಮದ ಮಾಬುಕಳ ಬಸ್ ನಿಲ್ದಾಣದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.28ರಂದು ಮಧ್ಯಾಹ್ನ ವೇಳೆ ಸುಮೋ ಜೀಪೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸಯ್ಯದ್ ಇಜಾಝ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕೋಟ ಕಡೆಗೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಟಾಟಾ ಸುಮೋ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇಜಾಝ್ ಚಿಕಿತ್ಸೆ ಫಲಕಾರಿಯಾಗದೆ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





