ಪರಿಸರ ಸಂರಕ್ಷಣೆಗೆ ವರದಿ ಉಪಯುಕ್ತ: ಮುಖ್ಯ ಕಾರ್ಯದರ್ಶಿ ರತ್ನಪ್ರಭಾ

ಬೆಂಗಳೂರು, ಜೂ. 29: ಪರಿಸರ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಂಬಂಧಿಸಿದ ಕೇಂದ್ರ 'ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ' ವರದಿ ರಾಜ್ಯದ ವಿವಿಧ ಇಲಾಖೆಗಳಿಗೆ ಅತ್ಯಂತ ಉಪಯುಕ್ತ ಮಾಹಿತಿ ಒದಗಿಸಲಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ 'ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ' ಕರ್ನಾಟಕ ಪರಿಸರ ಸ್ಥಿತಿ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಮಂತ್ರಾಲಯ ನೀಡಿದ ಅನುದಾನದಡಿ ಸಂಸ್ಥೆ ವರದಿ ಸಿದ್ಧಪಡಿಸಿದೆ. ಅರಣ್ಯ ಮತ್ತು ವನ್ಯಜೀವಿ, ಜೀವ ವೈವಿಧ್ಯತೆ, ಕರಾವಳಿ, ಗಣಿಗಾರಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವರದಿ ಮಹತ್ವದ ಶಿಫಾರಸುಗಳನ್ನು ನೀಡಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮಹಾ ನಿರ್ದೇಶಕಿ ರಿತುಕಕ್ಕರ್, ನಿರ್ದೇಶಕ ಡಾ.ಕೆ.ಎಚ್.ವಿನಯ ಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹಿರಿಯ ಅಧಿಕಾರಿಗಳಾದ ಮಂಜುಳಾ, ಬಸವರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.







