ಜುಲೈ 2ರಿಂದ ಜಂಟಿ ಅಧಿವೇಶನ: ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು, ಜೂ. 29: ವಿಧಾನ ಪರಿಷತ್ತಿಗೆ ಈ ಬಾರಿ ಹೊಸ ಸದಸ್ಯರು ಹೆಚ್ಚಾಗಿ ಆಯ್ಕೆಯಾಗಿದ್ದು, ಅವರು ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಕಲಾಪ ನಡೆಸಲಾಗುವುದು ಎಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಇಂದಿಲ್ಲಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಜುಲೈ 2ರಂದು ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
ಜು.2ರಿಂದ 12ರ ವರೆಗೆ ಕಲಾಪ ನಡೆಯಲಿದ್ದು, ಜು.5ಕ್ಕೆ ಹಣಕಾಸು ಸಚಿವರೂ ಆಗಿರುವ ಸಿಎಂ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿ ಕಲಾವಕಾಶ ಕಡಿಮೆ ಇದ್ದು, ಪ್ರಶ್ನೋತ್ತರ ಸೇರಿದಂತೆ ನಿಯಮದಂತೆ ಕಾರ್ಯ ಕಲಾಪ ನಡೆಸಲಾಗುವುದು ಎಂದು ಹೊರಟ್ಟಿ ತಿಳಿಸಿದರು.
Next Story





