Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ...

ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ಭೇಟಿ-ಪರಿಹಾರ ನೀಡುವ ಭರವಸೆ

ಮುಲ್ಲರಪಟ್ನ ತೂಗುಸೇತುವೆ ಸಂಪರ್ಕ ರಸ್ತೆ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ30 Jun 2018 9:27 PM IST
share
ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ಭೇಟಿ-ಪರಿಹಾರ ನೀಡುವ ಭರವಸೆ

ಬಂಟ್ವಾಳ, ಜೂ. 30: ಮುಲ್ಲರಪಟ್ನ ಫಲ್ಗುಣಿ ಸೇತುವೆ ಬಳಿ ತೂಗುಸೇತುವೆಯ ಬಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹಾಗೂ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶನಿವಾರ ಭೇಟಿ ಪರಿಶೀಲಿಸಿ, ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು.

ಇಲ್ಲಿನ ಅರಳ ಗ್ರಾಮದ ಮುಲ್ಲರಪಟ್ನ ಜುಮಾ ಮಸೀದಿ ಮತ್ತು ಕೊಟ್ಟದಡ್ಕ ದೈವಸ್ಥಾನ ಬಳಿ ಫಲ್ಗುಣಿ ನದಿ ತೀರದಲ್ಲಿ ಬಡಗಬೆಳ್ಳೂರು ಗ್ರಾಮ ವ್ಯಾಪ್ತಿಯಲ್ಲಿರುವ ತೂಗು ಸೇತುವೆ ಸಂಪರ್ಕಿಸಲು ಈ ಹಿಂದೆ ಮರಳುಗಾರರು ನಿರ್ಮಿಸಿದ್ದ ತಾತ್ಕಾಲಿಕ ರಸ್ತೆಯನ್ನು ಮತ್ತೆ ಕೆಂಪು ಕಲ್ಲು ಹಾಸುವ ಮೂಲಕ ಎತ್ತರಗೊಳಿಸಿ ಸಿಮೆಂಟ್ ಮಿಶ್ರಿತ ಜೆಲ್ಲಿ ಹಾಸುವ ಕಾಮಗಾರಿ ಕಳೆದ ನಾಲ್ಕೈದು ದಿನಗಳಿಂದ ಭರದಿಂದ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ನಿವಾಸಿಗಳಾದ ಸುಂದರ ಶೆಟ್ಟಿ, ಭೋಜ ಶೆಟ್ಟಿ, ಗೋಪಾಲ ಶೆಟ್ಟಿ, ಸಂಜೀವ ಶೆಟ್ಟಿ, ಬ್ರಿಜೇಶ ಶೆಟ್ಟಿ ಮತ್ತಿತರ ಜಮೀನಿನ ಬಳಿ ಬಂಟ್ವಾಳ ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಅವರು ಎರಡೆರಡು ಬೃಹತ್ ಗಾತ್ರದ ಸಿಮೆಂಟ್ ಪೈಪ್ ಅಳವಡಿಸಿ ಮೋರಿ ನಿರ್ಮಿಸಿದ್ದಾರೆ. ಈ ರಸ್ತೆ ಕಾಮಗಾರಿ ತ್ವರಿತಗೊಳಿಸಲು ಸ್ಥಳೀಯರ ಸಹಕಾರ ದೊರೆತರೆ ಮಾತ್ರ ಸಾಧ್ಯ. ಇಲ್ಲದಿದ್ದಲ್ಲಿ ಜು. 2ರಂದು ಪೂರ್ಣಗೊಳಿಸುವುದು ಅಸಾಧ್ಯ ಎಂದು ಗುತ್ತಿಗೆದಾರ ರಹಿಮಾನ್ ವಳವೂರು ಅವರು ಮಾಹಿತಿ ನೀಡಿದ್ದಾರೆ.

ಇಲ್ಲಿನ ಮುತ್ತೂರು ಸರಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಶೇ. 70ರಷ್ಟು ಮಂದಿ ವಿದ್ಯಾರ್ಥಿಗಳು ಮುಲ್ಲರಪಟ್ನ ಸೇತುವೆಯನ್ನೇ ಅವಲಂಬಿಸಿದ್ದಾರೆ. ಇದರಿಂದಾಗಿ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಅವರ ಸೂಚನೆಯಂತೆ ಜು. 2ರತನಕ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಇನ್ನೊಂದೆಡೆ ಬಹುತೇಕ ವಿದ್ಯಾರ್ಥಿಗಳಿಗೆ ತೂಗುಸೇತುವೆ ಸಂಚಾರ ಬಗ್ಗೆ ಭೀತಿ ವ್ಯಕ್ತಪಡಿಸುತ್ತಿದ್ದು, ಇದಕ್ಕಾಗಿ ತೂಗುಸೇತುವೆ ತನಕ ಮಕ್ಕಳ ಪೋಷಕರನ್ನು ಕೂಡಾ ಬರುವಂತೆ ವಿನಂತಿಸಲಾಗಿದೆ ಎಂದು ಮುಖ್ಯಶಿಕ್ಷಕ ಸಿಪ್ರಿಯಾನ್ ಡಿಸೋಜ ಪ್ರತಿಕ್ರಿಯಿಸಿದ್ದಾರೆ.

ಅಡಿಕೆ ಗಿಡಗಳಿಗೆ ಹಾನಿ: ದೂರು

ಸಂಪರ್ಕ ರಸ್ತೆ ನಿರ್ಮಿಸುವ ನೆಪದಲ್ಲಿ ಸುಮಾರು 20ಕ್ಕೂ ಮಿಕ್ಕಿ ಅಡಿಕೆ ಗಿಡ ಮತ್ತು ಕೆಲವೊಂದು ತೆಂಗಿನ ಗಿಡಗಳನ್ನು ರಾತ್ರಿ ವೇಳೆ ಕಿಡಿಗೇಡಿಗಳು ಕಡಿದು ಹಾಕಿ ಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ನಿವಾಸಿ ಸುಂದರ ಶೆಟ್ಟಿ ಎಂಬವರು ಶನಿವಾರ ಬಡಗಬೆಳ್ಳೂರು ಗ್ರಾಮ ಪಂಚಾಯತ್‌ಗೆ ದೂರು ಸಲ್ಲಿಸಿದ್ದಾರೆ. ಇಲ್ಲಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಹಾಯಕ ಕಮಿಷನರ್ ರೇಣುಕಾಪ್ರಸಾದ್, ತಹಶೀಲ್ದಾರ್ ಜಿ.ಸಂತೋಷ್ ಅವರಲ್ಲಿಯೂ ಈ ಬಗ್ಗೆ ದೂರಿಕೊಂಡಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ದೊರೆತಿದೆ ಎಂದಿದ್ದಾರೆ.

ಇದೇ ವೇಳೆ ತೂಗುಸೇತುವೆಯಲ್ಲಿ ಸಂಚರಿಸುವ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಕೆಲವೊಂದು ಕಿಡಿಗೇಡಿಗಳು ಮೊಬೈಲ್‌ನಲ್ಲಿ ಸೆಲ್ಫಿ ತೆಗೆಯುವ ಮೂಲಕ ಅವರ ಭಾವಚಿತ್ರ ಸೆರೆ ಹಿಡಿದು ಕಿರುಕುಳ ನೀಡುತ್ತಿದ್ದಾರೆ. ಇದಕ್ಕಾಗಿ ಎರಡು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮುತ್ತೂರು ಗ್ರಾಮ ಪಂಯತ್ ಮಾಜಿ ಸದಸ್ಯ ಹರಿಯಪ್ಪ ಅವರು ಜಿಲ್ಲಾಧಿಕಾರಿ ಮತ್ತು ಸಚಿವರಿಗೆ ಮನವಿ ಸಲ್ಲಿಸಿದರು.

ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವೈ.ಉಮೇಶ ಭಟ್, ಸಹಾಯಕ ಎಂಜಿನಿಯರ್ ಅರುಣ್ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಅರಳ ಗ್ರಾಪಂ ಅಧ್ಯಕ್ಷೆ ತುಂಗಮ್ಮ, ಉಪಾಧ್ಯಕ್ಷ ಅಗ್ಗೊಂಡೆ ಜಗದೀಶ ಆಳ್ವ, ಸದಸ್ಯ ಎಂ.ಬಿ.ಆಶ್ರಫ್, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ರಾಯಿ, ಮಾಜಿ ಅಧ್ಯಕ್ಷ ರಝಾಕ್ ಕುಕ್ಕಾಜೆ, ರೈತ ಮೋರ್ಚಾ ಮುಖಂಡ ನಂದರಾಮ ರೈ ಮತ್ತಿತರರು ಹಾಜರಿದ್ದರು.

ಮುತ್ತೂರು ಸಂಪರ್ಕ ರಸ್ತೆ ಪೂರ್ಣ:

ಕಳೆದ 3 ವರ್ಷಗಳ ಹಿಂದೆ ಬಡಗಬೆಳ್ಳೂರು ಮತ್ತು ಮುತ್ತೂರು ಗ್ರಾಮ ಸಂಪರ್ಕಿಸಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡ ತೂಗುಸೇತುವೆ ಇನ್ನೊಂದು ಬದಿಯಲ್ಲಿ ಮುತ್ತೂರು ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ನಡೆದಿದ್ದು, ಇಂದು ಸಂಜೆಯೊಳಗೆ ಸಿಮೆಂಟ್ ಮಿಶ್ರಿತ ಜೆಲ್ಲಿ ಹಾಸುವ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅರಳ ಕನ್ಸ್ಟ್ರಕ್ಷನ್ಸ್ ಸಂಸ್ಥೆ ಗುತ್ತಿಗೆದಾರ ರಂಜನ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X