Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಳಿವಿನ ಅಂಚಿನಲ್ಲಿರುವ ಸಿಹಿ ನೀರಿನ ಮೀನು...

ಅಳಿವಿನ ಅಂಚಿನಲ್ಲಿರುವ ಸಿಹಿ ನೀರಿನ ಮೀನು ಮರಿಗಳ ಮೂಲ ಆವಾಸಕ್ಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ30 Jun 2018 10:05 PM IST
share
ಅಳಿವಿನ ಅಂಚಿನಲ್ಲಿರುವ ಸಿಹಿ ನೀರಿನ ಮೀನು ಮರಿಗಳ ಮೂಲ ಆವಾಸಕ್ಕೆ ಬಿಡುಗಡೆ

ಮಂಗಳೂರು, ಜೂ.30: ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಸಂತಾನೋತ್ಪತ್ತಿ ಮಾಡಿ ಬೆಳೆಸಿದ ಪಶ್ಚಿಮ ಘಟ್ಟದ ಅಳಿವಿನ ಅಂಚಿನಲ್ಲಿರುವ ಸಿಹಿ ನೀರಿನ ಮತ್ಸ್ಯಪ್ರಬೇಧಗಳ ಮರಿಗಳನ್ನು ಅವುಗಳ ಮೂಲ ಆವಾಸಕ್ಕೆ ಬಿಡುವ ಕಾರ್ಯಕ್ರಮವು ರಾಜ್ಯ ಅರಣ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ದ.ಕ.ಜಿಪಂ ಸಹಯೋಗದೊಂದಿಗೆ ಗುರುವಾರ ವೇಣೂರು ಸಮೀಪದ ನಾರಾವಿಯಲ್ಲಿರುವ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿದೇಶಕ ವಿ.ಪ್ರಸನ್ನ ನಿಸರ್ಗಧಾಮದ ಲೇಕ್‌ಗಾರ್ಡನ್‌ನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪಶ್ಚಿಮ ಘಟ್ಟದ ಅಳಿವಿನ ಅಂಚಿನಲ್ಲಿರುವ ಮತ್ಸ್ಯಪ್ರಬೇಧಗಳ ಸಂತಾನೋತ್ಪತ್ತಿ ಮತ್ತು ಅಕ್ವೇರಿಯಂ ಸ್ಥಾಪನೆ ಶೀರ್ಷಿಕೆಯಡಿ 98 ಲಕ್ಷ ರೂ.ಅನುದಾನದಲ್ಲಿ ಅಕ್ವೇರಿಯಂನ್ನು ಸ್ಥಾಪಿಸಿ 22 ಜಾತಿಯ ಮೀನುಗಳನ್ನು ಸಾಕಿ ಸಾರ್ವಜನಿಕರಿಗೆ ಪ್ರದರ್ಶನಕ್ಕೆ ಇಡುವುದರ ಜೊತೆಗೆ ನಾಶದ ಅಂಚಿನಲ್ಲಿರುವ ಕಿಜಾನ್, ಮಲಬಾರ್ ಡೈನೊ, ಚಂದ್ರಡಿಕೆ ಮುಂತಾದ ಮೀನುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂತಾನೋತ್ಪತ್ತಿ ಮಾಡಿ ಅವುಗಳ ಮರಿಗಳನ್ನು ಪಶ್ಚಿಮ ಘಟ್ಟದ ಮೂಲ ಅವಾಸ ಸ್ಥಾನಕ್ಕೆ ಕೊಂಡೊಯ್ದು ಬಿಡುವುದು ಯೋಜನೆಯ ಮುಖ್ಯ ಉದ್ದೇಶ ಎಂದರು.

ಶಾಸಕ ಹರೀಶ ಪೂಂಜ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಪಂ ಸಿಇಒ ಡಾ.ಎಂ.ಆರ್.ರವಿ, ಜಿಪಂ ಸದಸ್ಯ ಪಿ. ಧರಣೇಂದ್ರ ಕುಮಾರ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ಸುಶ್ಮಿತಾ, ನಾರಾವಿ ಗ್ರಾಪಂ ಉಪಾಧ್ಯಕ್ಷೆ ಯಶೋಧಾ, ಸದಸ್ಯ ಉದಯ ಹೆಗ್ಡೆ, ಕುತ್ಲೂರು ಅರಣ್ಯ ಸಮಿತಿ ಅಧ್ಯಕ್ಷ ಶ್ರೀಧರ ಪೂಜಾರಿ ಉಪಸ್ಥಿತರಿದ್ದರು. ವೇಣೂರು ವಲಯ ಅರಣ್ಯಾಧಿಕಾರಿ ಪ್ರಶಾಂತ ಪೈ ಕಾರ್ಯಕ್ರಮ ನಿರೂಪಿಸಿದರು.

ಪಿಲಿಕುಳ ನಿಸರ್ಗಧಾಮದ ಪ್ರಾಂಶುಪಾಲೆ ಸೈಂಟಿಸ್ಟ್ ಡಾ.ಸೂರ್ಯಪ್ರಕಾಶ್ ಶೆಣೈ, ವೈಜ್ಞಾನಿಕ ಅಧಿಕಾರಿ ರಾಮಕೃಷ್ಣ ಮರಾಟಿ, ಪಿಲಿಕುಳ ಔಷಧಿ ವನದ ಮೇಲ್ವಿಚಾರಕ ಉದಯಕುಮಾರ್ ಶೆಟ್ಟಿ, ಅಕ್ವೇರಿಯಂ ಮೇಲ್ವಿಚಾರಕ ನಾಗೇಶ್ ಕುಲಾಲ, ಕ್ಷೇತ್ರ ಸಹಾಯಕ ರವಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X