Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಬೈಕ್ ಢಿಕ್ಕಿಯಾಗಿ ಮಹಿಳೆ ಮೃತ್ಯು

ಮಂಡ್ಯ: ಬೈಕ್ ಢಿಕ್ಕಿಯಾಗಿ ಮಹಿಳೆ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ30 Jun 2018 11:40 PM IST
share
ಮಂಡ್ಯ: ಬೈಕ್ ಢಿಕ್ಕಿಯಾಗಿ ಮಹಿಳೆ ಮೃತ್ಯು

ಮಂಡ್ಯ, ಜೂ.30: ತಾಲೂಕಿನ ಹಳೇ ಬೂದನೂರು ಗ್ರಾಮದ ಮಂಗಯ್ಯ ನಿಂಗಮ್ಮ ಧರ್ಮದತ್ತಿಯ ಸಂಸ್ಥಾಪಕ ದಿ.ಸಾಹುಕಾರ್ ಬಿ.ಎಂ.ರುದ್ರಪ್ಪ ಅವರ ಪತ್ನಿ ಗೌರಮ್ಮ (70) ಶನಿವಾರ ರಸ್ತೆ ಅಪಘಾತದಲ್ಲಿ ಮೃತ್ಪಟ್ಟಿದ್ದಾರೆ.

ಬೆಳಗ್ಗೆ ಮನೆ ಮುಂದಿನ ತಮ್ಮ ತೋಟಕ್ಕೆ ತೆರಳಿ ಕೆಲಸ ಮುಗಿಸಿ ಹಿಂದಿರುಗುವಾಗ ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿದ್ದ ಬೈಕ್ ಢಿಕ್ಕಿಯಾಗಿದ್ದು,  ಕೂಡಲೇ ಅವರನ್ನು ಹತ್ತಿರದ ಸಾಂಜೋ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಬಿಜಿಎಸ್ ಅಪೋಲೋ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ ಕೊನೆಯುಸಿರೆಳಿದಿದ್ದಾರೆ.

ಗೌರವ್ವ ಎಂದೇ ಮನೆ ಮಾತಾಗಿದ್ದ ಅವರು ಸರಳ ನಡೆನುಡಿಗಳಿಂದ ಜನರ ಪ್ರೀತಿಗೆ ಪಾತ್ರರಾಗಿದ್ದರು. ಹಲವೆಡೆ ಅಸ್ಪತ್ರೆ, ಶಾಲೆ, ಪಶು ಅಸ್ಪತ್ರೆಗಳಿಗೆ ನಿವೇಶನ, ಕಟ್ಟಡ ಮತ್ತು ಗ್ರಾಮದಲ್ಲಿ ದೇವಾಲಯ ನಿರ್ಮಾಣ, ಬಡವರಿಗೆ ನಿವೇಶನ ಹಾಗೂ ಆರೋಗ್ಯ ಶಿಬಿರ ಮುಂತಾಗಿ ಹಲವು ಸಮಾಜಮುಖಿ ಸೇವಾ ಕಾರ್ಯಗಳನ್ನು ನೆರವೇರಿಸಿ ಕೊಡುಗೈ ದಾನಿ ಎನಿಸಿಕೊಂಡಿದ್ದರು. ಶ್ರೀಯುತರ ಸೇವೆಗೆ ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸನ್ಮಾನಿಸಿ ಗೌರವಿಸಿದ್ದರು.

ಮೃತರಿಗೆ ಕವಯತ್ರಿ ಬಿ.ಆರ್.ಉಮಾದೇವಿ ಸೇರಿ ಮೂವರು ಹೆಣ್ಣು ಮಕ್ಕಳು, ಪುತ್ರ ಬಿ.ಆರ್.ಶಿವಪ್ರಸಾದ್, ಅಳಿಯರಾದ ಕನಕಪುರ ರೂರಲ್ ಎಜುಕೇಷನ್ ಸೊಸೈಟಿಯ ಮಾಜಿ ಅಧ್ಯಕ್ಷ ಕೆ.ಜಿ.ತಿಮ್ಮಪ್ಪ, ನಿವೃತ್ತ ಆರೋಗ್ಯಾಧಿಕಾರಿ ಡಾ.ಕೃಷ್ಣಪ್ರಸಾದ್ ಇದ್ದಾರೆ. ಜು.1 ರಂದು ಬೆಳಗ್ಗೆ ಹಳೇ ಬೂದನೂರಿನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.

ಸಂತಾಪ: ಗೌರಮ್ಮ ಅವರ ನಿಧನಕ್ಕೆ ಶಾಸಕ ಎಂ.ಶ್ರೀನಿವಾಸ್, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಪಂ ಸದಸ್ಯ ಎಚ್.ಎನ್.ಯೋಗೇಶ್, ಕರ್ನಾಟಕ ಗೃಹ ಮಂಡಳಿ ನಿರ್ದೇಶಕ ಬಿ.ಸಿ.ಶಿವಾನಂದ್, ಮುಖಂಡರಾದ ಬಿ.ಟಿ.ಅಂಕಯ್ಯ, ಬಿ.ಟಿ.ಸಿದ್ದರಾಮಯ್ಯ, ಬಿ.ಟಿ.ಚಂದ್ರಶೇಖರ್, ಬೂದನೂರು ಸ್ವಾಮಿ, ಅಮರಾವತಿ ಚಂದ್ರಶೇಖರ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X