Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾತಿ ಮೂಲಕ ಸಮಾಜ ಸಂಕುಚಿತವಾಗುತ್ತಿದೆ:...

ಜಾತಿ ಮೂಲಕ ಸಮಾಜ ಸಂಕುಚಿತವಾಗುತ್ತಿದೆ: ಡಾ.ತುಕರಾಂ ವಿಷಾದ

ಹೋರಾಟದ ನೆನಪುಗಳು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Jun 2018 11:43 PM IST
share
ಜಾತಿ ಮೂಲಕ ಸಮಾಜ ಸಂಕುಚಿತವಾಗುತ್ತಿದೆ: ಡಾ.ತುಕರಾಂ ವಿಷಾದ

ಮಂಡ್ಯ, ಜೂ.30: ಇಂದು ಜಾತಿಯ ಮೂಲಕ ಇಡೀ ಸಮಾಜ ಸಂಕುಚಿತವಾಗುತ್ತಿದ್ದು, ಎಡ-ಬಲ ಎಂದು ದಲಿತ ಸಂಘಟನೆಯ ನಾಯಕರು ಜಗಳವಾಡುತ್ತಿದ್ದಾರೆ ಎಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ.ತುಕರಾಂ ವಿಷಾದಿಸಿದ್ದಾರೆ.

ನಗರದ ಗಾಂಧಿಭವನದಲ್ಲಿ ದಲಿತ ಸಂಘರ್ಷ ಸಮಿತಿ ಶನಿವಾರ ಆಯೋಜಿಸಿದ್ದ ದಸಂಸ  ಚಿಕ್ಕಾಡೆ ಮಹದೇವಪ್ಪ  ಮತ್ತು ಹಲ್ಲೇಗೆರೆ ರಾಮಚಂದ್ರು ಹೋರಾಟದ ನೆನಪುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದಲಿತ ಮುಖಂಡರು ಎಡ-ಬಲ ವಿಚಾರ ಬದಿಗಿಟ್ಟು ನಾಲ್ಕು ದಶಕಗಳ ಕರ್ನಾಟಕದ ದಸಂಸ ಚಳವಳಿಯ ಹುಟ್ಟು ಬೆಳವಣಿಗೆ ವಿಕಾಸವಾಗುವುದಕ್ಕೆ ಸ್ಫೂರ್ತಿ ನೀಡಿದ ಇತಿಹಾಸದ ಬಗ್ಗೆ ಎಲ್ಲರಿಗೂ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಅವರು ಕರೆ ನೀಡಿದರು.

ನಿಮ್ಮ ಹೋರಾಟ, ಸ್ಫೂರ್ತಿ ಎಲ್ಲ ಜನಪರ ಚಳವಳಿಗಳಿಗೆ ನಾಂದಿಯಾಗಿದೆ. ದಲಿತ ಚಳವಳಿ ಜಾತಿ ಕಾರಣಕ್ಕಾಗಿ ಹೋರಾಟ ಮಾಡಿಲ್ಲ. ಸಮಾಜದಲ್ಲಿರುವ ಜಾತಿ ವಿಮೋಚನೆಗಾಗಿ ಕೆಲಸ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಹದೇವಪ್ಪ ಹಾಗೂ ರಾಮಚಂದ್ರು ಹಲವು ವರ್ಷ ನಮ್ಮೊಡನೆ ಇರಬೇಕಿತ್ತು. ವೈಚಾರಿಕವಾಗಿ ಯೋಚಿಸುತ್ತಿದ್ದ ಗೆಳೆಯರು ಇಷ್ಟು ಬೇಗ ಅಗಲಿರುವುದು ನೋವಿನ ವಿಷಯವಾಗಿದೆ. ಚಳವಳಿಯ ನಾಯಕರು ಆರೋಗ್ಯವನ್ನು ಕಾಪಾಡಿಕೊಂಡು ತಮ್ಮ ಕುಟುಂಬ, ಬಂಧು ಬಳಗವನ್ನು ನೆನಪಿಸಿಕೊಂಡು ಹೋರಾಟ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ವಾಸು ಮಾತನಾಡಿ, ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸುತ್ತಿದ್ದು, ಅದನ್ನು ತಡೆಯಲು ಹೊಸ ರೀತಿಯ ಆಂದೋಲನ ಪ್ರಾರಂಭವಾಗಬೇಕಿದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ನಾವು ಎಲ್ಲರೂ ಒಂದುಗೂಡಿ ಚಲಿಸಬೇಕಿದೆ ಎಂದರು.
ಹಲವು ದಶಕಗಳಿಂದ ಚಳವಳಿ ಕಟ್ಟಿರುವ ದಸಂಸ ನಾಯಕರ ಬಗ್ಗೆ ಕೆಲವರು ಲಘುವಾಗಿ ಮಾತನಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ದಾಳಿಗಳನ್ನು ಎದುರಿಸಿ ಸಂಘಟನೆ ಕಟ್ಟಿದ್ದಾರೆ. ದಾಳಿ ನಡೆಯುವ ಆತಂಕದಲ್ಲಿ ಸಂಘಟನೆಗೆ ಬೆನ್ನೆಲುಬಾಗಿ ನಿಂತು ನಾಡಿನ ಉದ್ದಗಲಕ್ಕೂ ಓಡಾಡಿ ಕೆಲಸ ಮಾಡುವ ಜನಪರ ಚಳವಳಿಯ ಕಾರ್ಯಕರ್ತರ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕಿದೆ ಎಂದು ಅವರು ಸಲಹೆ ನೀಡಿದರು.

ಇಂದು ಸಾಮಾಜಿಕ ಚಳವಳಿ ನಡೆಯುತ್ತಿರುವ ಸಂದರ್ಭದಲ್ಲಿ ಜನರು ಅವರನ್ನು ಸುಮ್ಮನೆ ನೋಡಿಕೊಂಡು ಹೋಗುವಂತಾಗಿದೆ. ಅವರು ಯಾವ ಕಾರಣಕ್ಕೆ ಚಳವಳಿ ರೂಪಿಸುತ್ತಿದ್ದಾರೆ. ಅದರಿಂದ ಸಮಾಜಕ್ಕೆ ಏನು ಸಂದೇಶವಿದೆ ಎಂಬುದನ್ನು ತಿಳಿಯುವ ಪ್ರಯತ್ನವನ್ನು ಯಾರೂ ಮಾಡುತ್ತಿಲ್ಲ ಎಂದು ಅವರು ವಿಷಾದಿಸಿದರು.

ಮೈಸೂರು ವಿವಿ ಅಂಬೇಡ್ಕರ್ ಅಧ್ಯಯನ ಕೇಂದ್ರ ಸಂಯೋಜನಾಧಿಕಾರಿ ಡಾ.ನರೇಂದ್ರಕುಮಾರ್, ದಸಂಸ ರಾಜ್ಯ ಸಂಘಟನಾ ಸಂಚಾಲಕ ಎಚ್.ಸಿ.ಸಿದ್ದಲಿಂಗಯ್ಯ, ಪತ್ರಕರ್ತ ಸೋಮಶೇಖರ್ ಕೆರಗೋಡು, ಸಿಐಟಿಯುನ ಸಿ.ಕುಮಾರಿ ಮಾತನಾಡಿದರು.  ದಸಂಸ ರಾಜ್ಯಸಂಚಾಲಕ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು.

ಹುರುಗಲವಾಡಿ ರಾಮಯ್ಯ, ಮಂಜುಳಾ, ಗಾಮನಹಳ್ಳಿ ಸ್ವಾಮಿ ಹೋರಾಟದ ಹಾಡುಗಳನ್ನು ಹಾಡಿದರು. ರೈತಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಮಹಿಳಾ ಘಟಕದ ಅಧ್ಯಕ್ಷೆ ಲತಾ ಶಂಕರ್, ಮುಖಂಡರಾದ ಹೆಬ್ಬಾಲೆ ಲಿಂಗರಾಜು, ಬ್ಯಾಡರಹಳ್ಳಿ ಪ್ರಕಾಶ್, ಆಲಗೂರು ಶಿವಕುಮಾರ್, ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X