Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್...

ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ವತಿಯಿಂದ ವೈದ್ಯರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 July 2018 8:12 PM IST
share
ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ವತಿಯಿಂದ ವೈದ್ಯರ ದಿನಾಚರಣೆ

ಮಂಗಳೂರು, ಜು.1: ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಫೊರೆನ್ಸಿಕ್ ಮೆಡಿಸಿನ್ ಮತ್ತು ಟೊಕ್ಸಿಕಾಲಜಿ ವಿಭಾಗವು ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಸಹಯೋಗದಲ್ಲಿ ‘ವೈದ್ಯಕೀಯ ದಾಖಲೆಗಳು ಹಾಗೂ ಕಾನೂನಿನ ದೃಷ್ಟಿಯಲ್ಲಿ ಅವುಗಳಿಗೆ ಇರುವ ಮಹತ್ವ’ ಎಂಬ ವಿಷಯದ ಕುರಿತು ‘ಕ್ವೆಸ್ಟ್-2018’ ಕಾರ್ಯಕ್ರಮವನ್ನು ರವಿವಾರ ಏರ್ಪಡಿಸಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಎಸಿಪಿ ರಾಮರಾವ್ ವೈದ್ಯಕೀಯ ದಾಖಲೆಗಳಿಗೆ ಕಾನೂನಿನ ದೃಷ್ಟಿಯಲ್ಲಿ ಅತ್ಯಂತ ಮಹತ್ವದ ಸ್ಥಾನವಿದೆ. ರೋಗಿಯ ಸಮಗ್ರ ವಿವರಗಳು ನಮೂದಾಗುವಂತೆ ವೈದ್ಯಕೀಯ ದಾಖಲೆಗಳನ್ನು ನಿರ್ವಹಣೆ ಮಾಡಿಕೊಂಡು ಬರಬೇಕು ಎಂದು ಸಲಹೆ ನೀಡಿದರು.

ಅಪಘಾತ, ಕೊಲೆ, ಅಸಹಜ ಸಾವು ಮತ್ತಿತರ ಪ್ರಕರಣಗಳಲ್ಲಿ ವೈದ್ಯರು ದಾಖಲಿಸುವ ಮಾಹಿತಿಗಳಿಗೂ ಪೊಲೀಸರು ದಾಖಲಿಸುವ ಮಾಹಿತಿಗಳಿಗೂ ಪರಸ್ಪರ ಸಾಮ್ಯತೆ ಇದ್ದರೆ ಮಾತ್ರ ನ್ಯಾಯಾಲಯದಲ್ಲಿ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಪೊಲೀಸರು ವಿವಿಧ ಪ್ರಕರಣಗಳಲ್ಲಿ ಹೇಳಿಕೆಗಳನ್ನು ಪಡೆದು ದಾಖಲಿಸುವಾಗ ಸಮಗ್ರ ಮಾಹಿತಿಯನ್ನು ಪಡೆದು ನಮೂದಿಸುತ್ತಾರೆ. ಅದೇ ರೀತಿ ವೈದ್ಯರು ಕೂಡಾ ಸಂಪೂರ್ಣ ವಿವರಗಳನ್ನು ದಾಖಲಿಸಬೇಕು ಎಂದು ರಾಮ್‌ರಾವ್ ಹೇಳಿದರು.

ವಿದ್ಯಾರ್ಥಿಗಳು ಫೇಸ್‌ಬುಕ್, ವಾಟ್ಸಪ್ ಮತ್ತಿತರ ಸಾಮಾಜಿಕ ಜಾಲತಾಣಗಳ ದುರ್ಬಳಕೆ ಬಗ್ಗೆ ಎಚ್ಚರಿಕೆಯಿಂದಿರಬೇಕು. ಅವಹೇಳನಕಾರಿ ಮೆಸೇಜ್ ಹಾಕಿ ಡಿಲೀಟ್ ಮಾಡಿದರೂ ಅದನ್ನು ಪತ್ತೆ ಹಚ್ಚಲಾಗುತ್ತದೆ. ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿಕೊಂಡೇ ಗಾಂಜಾ ಮತ್ತು ಇತರ ಮಾದಕ ವಸ್ತುಗಳ ವ್ಯವಹಾರ ನಡೆಯುತ್ತಿದ್ದು, ಇದಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚಾರ್ಡ್ ಎ. ಕುವೆಲ್ಲೊ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಫಾ. ವಿನ್ಸೆಂಟ್ ವಿನೋದ್ ಸಲ್ದಾನ್ಹಾ, ಫಾ. ಸಿಲ್ವೆಸ್ಟರ್ ಲೋಬೊ ಮುಂತಾದವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡಾ. ನಾಗೇಶ್ ಕೆ.ಆರ್. ಮತ್ತು ಡಾ. ಹರೀಶ್ ಗೌಡ, ಎಸ್‌ಡಿಎಂ ಕಾನೂನು ಕಾಲೇಜಿನ ಉಪನ್ಯಾಸಕ ಮಹೇಶ್‌ಚಂದ್ರ, ಎ.ಜೆ. ಮೆಡಿಕಲ್ ಕಾಲೇಜಿನ ಡಾ. ಫ್ರಾನ್ಸಿಸ್ ಅವರು ವೈದ್ಯಕೀಯ ದಾಖಲೆಗಳ ಮಹತ್ವದ ಕುರಿತು ವಿವಿಧ ಮಾಹಿತಿ ನೀಡಿದರು.

ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಶಿವಪ್ರಸಾದ್ ಕೆ. ಸ್ವಾಗತಿಸಿದರು. ಫೊರೆನ್ಸಿಕ್ ಮೆಡಿಸಿನ್ ಮತ್ತು ಟೊಕ್ಸಿಕಾಲಜಿ ವಿಭಾಗದ ಮುಖ್ಯಸ್ಥೆ ಹಾಗೂ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ. ಮಡೊನ್ನಾ ಜೋಸೆಫ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X