Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜವನ್ನು ಒಂದುಗೂಡಿಸುವ ಕೆಲಸ...

ಸಮಾಜವನ್ನು ಒಂದುಗೂಡಿಸುವ ಕೆಲಸ ಮಾಧ್ಯಮರಂಗದಿಂದಾಗಲಿ -ನಳಿನ್ ಕುಮಾರ್

ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ2 July 2018 7:15 PM IST
share
ಸಮಾಜವನ್ನು ಒಂದುಗೂಡಿಸುವ ಕೆಲಸ ಮಾಧ್ಯಮರಂಗದಿಂದಾಗಲಿ -ನಳಿನ್ ಕುಮಾರ್

ಮಂಗಳೂರು, ಜು. 2: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳು ಸಮಾಜದ ಜನರನ್ನು ಒಂದುಗೂಡಿಸುವ ,ಸೂಕ್ತ ಮಾರ್ಗದರ್ಶನ ನೀಡುವಂತಾಗಲಿ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಹೇಳಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ಸೋಮವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ ಹೋರಾಟಗಾರರದ ಬಾಲ ಗಾಂಗಾಧರ ತಿಲಕ್ ಅವರು ಕೇಸರಿ ಪತ್ರಿಕೆ, ಮಹಾತ್ಮ ಗಾಂಧೀಜಿ ಹರಿಜನ ಪತ್ರಿಕೆಯ ಮೂಲಕ ಜನಜಾಗೃತಿಗೆ ಒತ್ತು ನೀಡಿದ್ದರು. ಸ್ವಾತಂತ್ರ್ಯ ಪೂರ್ವದಿಂದಲೂ ಮಾಧ್ಯಮಗಳು ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರವಹಿಸಿದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ದೇಶದ ಜನಕ್ಕೆ ಅನ್ಯಾಯವಾದಾಗಲೆಲ್ಲಾ ಪತ್ರಿಕೆಗಳು ಧ್ವನಿಯೆತ್ತಿವೆ. ಜನತೆಯನ್ನು ಹೋರಾಟದ ಹಾದಿಯಲ್ಲಿ ತೊಡಗಿಸಿಕೊಳ್ಳುವಲ್ಲಿ ಪ್ರೇರೇಪಿಸಿವೆ. ದೇಶ ಸ್ವಾತಂತ್ರ್ಯ ಕಂಡ ಬಳಿಕವೂ ಮಾಧ್ಯಮಗಳು ಸರಿ -ತಪ್ಪುಗಳ ಬಗ್ಗೆ ತಿಳಿಸುತ್ತಾ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಾ ಬಂದಿದೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಪ್ರಸಕ್ತ ಪತ್ರಿಕಾ ಮಾಧ್ಯಮದ ಜೊತೆ ಮತ್ತು ನವ ಮಾಧ್ಯಮಗಳಲ್ಲಿ ದೃಶ್ಯ ಮಾಧ್ಯಮಗಳು ಸೇರ್ಪಡೆಗೊಂಡಿವೆ. ಟಿಆರ್‌ಪಿ ಹಿಂದೆ ಓಡುವ ದೃಶ್ಯ ಮಾಧ್ಯಮಗಳು ಕೆಲವೊಮ್ಮೆ ಮಾಧ್ಯಮದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಆದರೆ ಮುದ್ರಣ ಮಾಧ್ಯಮಗಳು ಮಾತ್ರ ಇಂದಿಗೂ ಜನತೆಯ ವಿಶ್ವಾಸಾರ್ಹತೆ ಉಳಿಸಿಕೊಂಡಿವೆ. ಮಾಧ್ಯಮಗಳ ಮೂಲ ಆಶಯವನ್ನು ಉಳಿಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಸರಿಯಾದ ಮಾರ್ಗದರ್ಶನ ನೀಡಬೇಕಾದ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ನಳಿನ್ ಕುಮಾರ್ ಹೇಳಿದರು.

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ‘ಸಮಾಜ ಮತ್ತು ಮಾಧ್ಯಮದ ಜವಾಬ್ದಾರಿಗಳು’ ವಿಷಯದ ಕುರಿತಂತೆ ಮಾತನಾಡುತ್ತಾ , ಜಗತ್ತಿನಲ್ಲಿ ಹಲವಾರು ಭೃಷ್ಟಾಚಾರ ಪ್ರಕರಣಗಳನ್ನು ಪತ್ರಿಕೆಗಳು ಬಯಲು ಮಾಡಿದೆ. ಅತೀ ರಂಜಿತ, ವೈಭವೀಕೃತ ಸುದ್ದಿಗಳಿಗೆ ಮಹತ್ವ ನೀಡದೆ. ಸಮಾಜದ ಅಭಿವೃದ್ಧಿಯ ವೇಗ ವರ್ಧಕಗಳಾಗಿ ಪತ್ರಿಕೆಗಳು ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಇದೆ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಅವರು ರಚಿಸಿರುವ 48 ವರ್ಷಗಳ ತುಳು ಸಿನಿಮಾ ರಂಗದ ಕುರಿತಾದ ‘ಸಿನಿಮಾವಲೋಕನ’ ಕೃತಿಯನ್ನು ಸಂಸದರಿಗೆ ಹಸ್ತಾಂತರಿಸಿದರು.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಅತಿಥಿಗಳಾಗಿ ಭಾಗವಹಿಸಿದ್ದರು.ಸಂಘದ ಪ್ರಧಾನಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ವಂದಿಸಿದರು. ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X