ಬೆಂಗಳೂರು: ವಾಹನ ಕಳವು ಆರೋಪಿಯ ಬಂಧನ

ಬೆಂಗಳೂರು, ಜು.2: ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದಂತಹ ದ್ವಿಚಕ್ರ ವಾಹನಗಳ ಹ್ಯಾಂಡ್‌ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಈಶಾನ್ಯ ವಿಭಾಗದ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯಲಹಂಕದ 7ನೇ ಕ್ರಾಸ್, ಬಂಡೆ ಲೇಔಟ್ ನಿವಾಸಿ ಮುಹಮ್ಮದ್ ಸಾದಿಕ್(21) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಈ ಹಿಂದೆಯೂ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭಸಿ ಹೊರಬಂದು ನಂತರ ತನ್ನ ಚಾಳಿ ಮುಂದುವರಿಸಿದ್ದ. ಈತನ ಬಂಧನದಿಂದ 4.50 ಲಕ್ಷ ರೂ. ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
Next Story





