ಸಿಇಟಿ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಜು.2: 2018-19ನೇ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದಡಿ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಸಿಇಟಿ ತರಬೇತಿ ನೀಡುವ ಕುರಿತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಂದ ಪಡೆದು, ಭರ್ತಿ ಮಾಡಿ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ, ದೃಢೀಕೃತ ಎಸೆಸೆಲ್ಸಿ ಅಂಕಪಟ್ಟಿಯ ನಕಲು ಪ್ರತಿ, ದೃಢಿಕೃತ ಜಾತಿ ಮತ್ತು ಆದಾಯ ಪಮಾಣ ಪತ್ರ, ಸ್ವಯಂ ದೃಢೀಕೃತ ಇತ್ತೀಚಿನ ಎರಡು ಭಾವಚಿತ್ರ, ಪೂರ್ಣ ಗ್ರಾಮ/ತಾಲೂಕು/ಜಿಲ್ಲಾ ವಿಳಾಸವನ್ನು (ಪಿನ್‌ಕೋಡ್) ಲಗತ್ತಿಸಿ,ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ಕಛೇರಿಗೆ ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574881 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ (ದೂರವಾಣಿ: 0820-2574596), ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಾರ್ಕಳ ಮತ್ತು ಕುಂದಾಪುರ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಡುಪಿ ಇವರ ಪ್ರಕಟಣೆ ತಿಳಿಸಿದೆ.





