ಬೆಂಗಳೂರು: 4ನೇ ಮಹಡಿಯಿಂದ ಬಿದ್ದು ಕಟ್ಟಡ ಕಾರ್ಮಿಕ ಮೃತ್ಯು

ಬೆಂಗಳೂರು, ಜು. 3: ಮಾನಸಿಕ ಖಿನ್ನತೆಗೊಳಗಾಗಿದ್ದ ಕಟ್ಟಡ ಕಾರ್ಮಿಕನೊಬ್ಬ 4ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಮಸ್ಕಿ ಮೂಲದ ಲಕ್ಷ್ಮಣ್ (30) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದು, ಕುಟುಂಬದವರೊಡನೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ಮಣಿಪಾಲ ಕೌಂಟಿ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





