ಬೆಂಗಳೂರು: ಮಳಿಗೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಅಪಾರ ನಷ್ಟ
ಬೆಂಗಳೂರು, ಜು.3: ಗ್ರಂಧಿಗೆ ಮಳಿಗೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನೆಲಮಂಗಲದ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ಜಯಮ್ಮ ಎಂಬುವರಿಗೆ ಸೇರಿದ ಗ್ರಂಧಿಗೆ ಅಂಗಡಿ ಮಳಿಗೆಯಲ್ಲಿ ಬೆಂಕಿ ತಾಗಿ ಸುಮಾರು 2 ಲಕ್ಷ ಮೌಲ್ಯದ ಗ್ರಂಧಿಗೆ ಸಾಮಗ್ರಿಗಳು ಸೇರಿದಂತೆ ಹೂವು ಹಣ್ಣು ಕಾಯಿ ಬೆಂಕಿಯಿಂದ ಸುಟ್ಟು ಹೋಗಿದೆ ಎಂದು ಮಾಹಿತಿ ದೊರೆತಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಈ ಸಂಬಂಧ ನೆಲಮಂಗಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story





