Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: 2018-19ನೇ ಸಾಲಿನ ಸಮಗ್ರ ಕೃಷಿ...

ಹನೂರು: 2018-19ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 July 2018 10:43 PM IST
share
ಹನೂರು: 2018-19ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

ಹನೂರು,ಜು.03: ವಿದ್ಯಾವಂತರು ಕೆಲಸ ಹರಸಿ ಹಳ್ಳಿ ಬಿಟ್ಟು ನಗರ, ಪಟ್ಟಣಗಳತ್ತ ಮುಖ ಮಾಡುತ್ತಿರುವುದು ಒಂದಲ್ಲ ಒಂದು ದಿನ ಕೃಷಿಗೆ ಬೀಳುವ ದೊಡ್ಡ ಪೆಟ್ಟಾಗಿರುತ್ತದೆ ಎಂದು ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ತಿರುಮಲೇಶ್ ಅಭಿಪ್ರಾಯ ಪಟ್ಟರು. 

ಲೊಕ್ಕನಹಳ್ಳಿ ಹೋಬಳಿ ಕೇಂದ್ರ ಕೃಷಿ ಇಲಾಖೆ ಆವರಣದಲ್ಲಿ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಕಂದಾಯ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ 2018-19ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೆ ಅನ್ನ ನೀಡುತ್ತಿರುವ ರೈತ ಬೆಳೆಯಿಂದ ನಷ್ಟ ಅನುಭವಿಸಿದಾಗ ಅಥವಾ ಬೆಂಬಲ ಬೆಲೆ ಸಿಗದಿದ್ದಾಗ ಕೆಲವೊಮ್ಮೆ ನಮ್ಮ ಕಷ್ಟಕ್ಕೆ ಯಾರು ಬರುತ್ತಿಲ್ಲ ಎಂದು ನೊಂದು ಕೊಳ್ಳುವುದಕ್ಕಿಂತ ನಾವು ಎಷ್ಟು ಮಂದಿಗೆ ನೆರವಾಗಿದ್ದೇವೆ ಎಂಬ ಆತ್ಮ ವಿಶ್ವಾಸ ಇಟ್ಟುಕೊಳ್ಳಬೇಕು. ಪ್ರತಿಯೊಬ್ಬ ರೈತರು ಒಂದೇ ರೀತಿ ಫಸಲುನ್ನು ಬೆಳೆಯುವುದರಿಂದ ಮತ್ತು ಮಣ್ಣಿನಾಂಶ ಪರೀಕ್ಷಿಸಿ ಪೋಷಕಾಂಶ ಕೊರತೆಗೆ ಅನುಗುಣವಾಗಿ ಬೇಸಾಯ ಮಾಡದಿರುವುದು ಮತ್ತು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದಿದ್ದಾಗ ರೈತರು ಕೃಷಿಯಲ್ಲಿ ಕಷ್ಟ ನಷ್ಟ ಅನುಭವಿಸುತ್ತಾರೆ. ಪ್ರತಿಯೊಬ್ಬರು ಇರುವಷ್ಟು ಭೂಮಿಯಲ್ಲಿ ಏಳೆಂಟು ವಿವಿಧ ಮಾದರಿ ಬೆಳೆ ಬೆಳೆದರೆ ಒಂದಲ್ಲ ಒಂದು ಫಸಲು ಕೈ ಸೇರುತ್ತದೆ. ಅದರ ಜೊತೆಗೆ ಕುರಿ, ಕೋಳಿ, ಮೇಕೆ, ಹಸು, ತರಕಾಯಿ ಫಲ್ಯಗಳನ್ನು ಬೆಳೆಯುವ ಮೂಲಕ ಆರ್ಥಿಕ ಅಭಿವೃದ್ದಿ ಹೊಂದಬಹುದು.  

ಆದರೆ ಇತ್ತೀಚಿನ ದಿನಗಳಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಫೇಲ್ ಆದವರು ಮತ್ತು ಡಬಲ್ ಡಿಗ್ರಿ ಪಡೆದಿರುವಂತ ವಿದ್ಯಾವಂತರು ಹಳ್ಳಿ ಪರಿಸರ ಬಿಟ್ಟು ಪಟ್ಟಣ ಕಡೆಗೆ ಹೋಗುತ್ತಿವುದು ಮುಂದೊಂದು ದಿನ ಕೃಷಿ ವಿನಾಶಕ್ಕೆ ಕಾರಣವಾಗಬಹುದು. ಕಷ್ಟಗಳು ಎಲ್ಲರಲ್ಲೂ ಇರುತ್ತದೆ. ಅದಕ್ಕಾಗಿ ಊರು ಬಿಡುವುದು, ಕೃಷಿ ಬಿಡುವುದು ಬೇಡ. ಪಟ್ಟಣಗಳಲ್ಲಿ ಕೆಲಸ ಮಾಡಿದರೆ ನಿಮ್ಮ ಒಬ್ಬರ ಹೊಟ್ಟೆ ತುಂಬಬಹುದು. ಆದರೆ ಕೃಷಿಯಲ್ಲಿ ಮನಸ್ಸಿಟ್ಟರೆ ದೇಶದ ಪ್ರತಿಯೊಬ್ಬರಿಗೂ ಅನ್ನ ನೀಡಬಹುದು ಎಂಬದನ್ನು ವಿದ್ಯಾವಂತರು ಅರಿತುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಮರುಗದಮಣಿ, ತಾ.ಪಂ. ಅಧ್ಯಕ್ಷ ರಾಜು, ಸದಸ್ಯೆ ಶಿವಮ್ಮ, ಮಹಾದೇವಸ್ವಾಮಿ, ಗ್ರಾ.ಪಂ.ಅಧ್ಯಕ್ಷ ರಂಗಶೆಟ್ಟಿ, ಉಪಾಧ್ಯಕ್ಷೆ ಸುಮತಿ, ಸದಸ್ಯ ಮಲ್ಲಯ್ಯ, ಕಣ್ಣೂರು ಗ್ರಾ.ಪಂ.ಅಧ್ಯಕ್ಷೆ ನಾಗಮ್ಮ, ಕೃಷಿ ನಿರ್ದೆಶಕ ಮಹದೇವು, ತೋಟಗಾರಿ ಇಲಾಖಾಧಿಕಾರಿ ಶಶಿಧರ್, ಡಾ.ಶಿವಪ್ಪ, ಪಂಪನಗೌಡ, ಕೃಷಿ ಅಧಿಕಾರಿಗಳಾದ ದೊರೆರಾಜ್, ಮನೋಹರ್, ಸಿದ್ದಪ್ಪಸ್ವಾಮಿ, ರೈತರು, ಮಹಿಳ ಸಂಘದ ಸದಸ್ಯರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X