ಉಡುಪಿ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವನಮಹೋತ್ಸವ ಆಚರಣೆ

ಉಡುಪಿ, ಜು.3: ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಉಡುಪಿ, ಸಮೃಧ್ಧಿ ಮಹಿಳಾ ಮಂಡಳ ಪೇತ್ರಿ ಹಾಗೂ ಜೇಸಿಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಣ್ಣು ಹಂಪಲಿನ ಗಿಡಗಳನ್ನು ನೆಡುವ ವನಮಹೋತ್ಸವದ ಆಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಣ್ಣಿನ ಗಿಡಗಳನ್ನು ನೆಟ್ಟರು.
Next Story





