ಮಡಿಕೇರಿ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

ಮಡಿಕೇರಿ ಜು.3 : ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗರ್ವಾಲೆಯಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಮಣಿ ಎಂಬಾಕೆಯ ಪತಿ ಕುಮಾರ ಎಂಬವರೇ ಸಾವಿಗೀಡಾದವರಾಗಿದ್ದಾರೆ.
ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವಿಗೀಡಾಗಿದ್ದಾಗಿ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





