Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಮಾಕುಟ್ಟ ರಸ್ತೆ ಕಾಮಗಾರಿ...

ಮಡಿಕೇರಿ: ಮಾಕುಟ್ಟ ರಸ್ತೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ; 2 ದಿನದಲ್ಲಿ ಲಘು ವಾಹನ ಸಂಚಾರದ ಭರವಸೆ

ವಾರ್ತಾಭಾರತಿವಾರ್ತಾಭಾರತಿ3 July 2018 11:42 PM IST
share
ಮಡಿಕೇರಿ: ಮಾಕುಟ್ಟ ರಸ್ತೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ; 2 ದಿನದಲ್ಲಿ ಲಘು ವಾಹನ ಸಂಚಾರದ ಭರವಸೆ

ಮಡಿಕೇರಿ, ಜು.3 : ಮಾಕುಟ್ಟದಲ್ಲಿ ಭೂ ಕುಸಿತ ಉಂಟಾಗಿ ವಾಹನ ಸಂಚಾರ ಸ್ಥಗಿತಗೊಂಡಿರುವ ಕೊಡಗು- ಕೇರಳ ನಡುವಿನ ಅಂತರರಾಜ್ಯ ಹೆದ್ದಾರಿ ಕಾಮಗಾರಿಯನ್ನು ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಪರಿಶೀಲಿಸಿದರು.

ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಅವರು ರಸ್ತೆ ಅವ್ಯವಸ್ಥೆ ಮತ್ತು ಕಾಮಗಾರಿಯ ಪ್ರಗತಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕೋಪಯೋಗಿ ಇಲಾಖೆ, ಮಡಿಕೇರಿಯ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ರಸ್ತೆ ಗುಣಮಟ್ಟದ ಧೃಢೀಕರಣದ ಆಧಾರದ ಮೇಲೆ ಇನ್ನು ಎರಡು ದಿನಗಳ ನಂತರ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದರು.

ಮಾಕುಟ್ಟ ರಸ್ತೆಯಲ್ಲಿ ಈಗಾಗಲೇ ಲಘು ವಾಹನ ಸಂಚಾರಕ್ಕೆ ಅಗ್ಯವಿರುವಷ್ಟು ಕಾಮಗಾರಿ ಪೂರ್ಣವಾಗಿದ್ದು, ರಸ್ತೆಗೆ ಕುಸಿದಿದ್ದ ಬರೆಯ ಮಣ್ಣು ತೆಗೆದು ರಸ್ತೆಯ ಮೇಲೆ ಬಿದ್ದಿದ್ದ ಮರಗಳನ್ನು ಬದಿಗೆ ಸರಿಸಲಾಗಿದೆ. ಎರಡನೇ ಹಂತದ ರಸ್ತೆ ದುರಸ್ತಿಗಾಗಿ  6 ಕೋಟಿ ವೆಚ್ಚದ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶ್ರೀವಿದ್ಯಾ ತಿಳಿಸಿದರು.

ಮಾಕುಟ್ಟ ರಸ್ತೆ ವೀಕ್ಷಣೆ ಸಂದರ್ಭ ಜಿಲ್ಲಾಧಿಕಾರಿ ಜೊತೆಯಲ್ಲಿ ತಾಲೂಕು ತಹಶೀಲ್ದಾರ್ ಆರ್.ಗೋವಿಂದರಾಜ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ  ಅಭಿಯಂತರ ಪ್ರಭು, ಸಹಾಯಕ ಅಭಿಯಂತರ ಸುರೇಶ್, ಸರ್ಕಲ್ ಇನ್ಸ್‍ಪೆಕ್ಟರ್ ಕುಮಾರ್ ಆರಾಧ್ಯ, ಅರಣ್ಯ ವಿಭಾಗಾಧಿಕಾರಿ ಮರಿಯಾ ಕ್ರಿಸ್ತರಾಜು, ಕಂದಾಯ ಪರಿವೀಕ್ಷಕ ಪಳಂಗಪ್ಪ, ಠಾಣಾಧಿಕಾರಿ ಸುರೇಶ್ ಬೋಪಣ್ಣ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಡಿಸಿ

ಜಿಲ್ಲಾಧಿಕಾರಿ ಅವರು ಮಾಕುಟ್ಟಕ್ಕೆ ತೆರಳುವ ಸಂದರ್ಭ ಪೆರುಂಬಾಡಿ ಚೆಕ್ ಪೋಸ್ಟ್‍ನಲ್ಲಿದ್ದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಯಾರೂ ಹಣ ಪಡೆದು ಲಘು ವಾಹನಗಳನ್ನು ಮಾಕುಟ್ಟಕ್ಕೆ ಬಿಡುವಂತಿಲ್ಲ ಎಂದು ಇದೇ ಸಂದರ್ಭ ಆದೇಶಿಸಿದರು. ಚೆಕ್‍ಪೋಸ್ಟ್ ನ ಸಿಬ್ಬಂದಿಗಳು ಶಿಸ್ತುಬದ್ಧವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಜನರ ಮನವಿ
ಹಾನಿಗೊಳಗಾದ ರಸ್ತೆಯನ್ನು ಆದಷ್ಟು ಶೀಘ್ರ ಅಭಿವೃದ್ಧಿಪಡಿಸಿ ಲಾರಿ ಬಸ್ಸು ಇತರ ವಾಹನಗಳು ಸಂಚರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೇರಳದ ಕೂಟುಪೊಳೆ ಹಾಗೂ ಮಾಕುಟ್ಟದ ನಿವಾಸಿಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X