ಅಕ್ಮಲ್ ರನ್ನು ಹಿಂದಿಕ್ಕಿ ಟಿ20 ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಧೋನಿ

ಹೊಸದಿಲ್ಲಿ, ಜು.4: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಧೋನಿ ಸ್ಪಂಪ್ ಮಾಡುವ ಮೂಲಕ ಅತೀ ಹೆಚ್ಚು ಸ್ಪಂಪ್ ಮಾಡಿದ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಈ ದಾಖಲೆ ಈ ಮೊದಲು ಪಾಕಿಸ್ತಾನದ ಕಮ್ರಾನ್ ಅಕ್ಮಲ್ ಹೆಸರಿನಲ್ಲಿತ್ತು. ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮೊದಲು ಈ ದಾಖಲೆಯನ್ನು ಮುರಿಯಲು ಧೋನಿಗೆ 2 ವಿಕೆಟ್ ಗಳ ಅವಶ್ಯಕತೆಯಿತ್ತು. ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿನ ಸ್ಟಂಪಿಂಗ್ ಮೂಲಕ 33 ಸ್ಟಂಪ್ ಮಾಡಿರುವ ಧೋನಿ ಅಗ್ರಸ್ಥಾನದಲ್ಲಿದ್ದಾರೆ.
ಕಮ್ರಾನ್ ಅಕ್ಮಲ್ 2ನೆ ಸ್ಥಾನದಲ್ಲಿದ್ದು, 32 ಸ್ಟಂಪಿಂಗ್ ಮಾಡಿದ್ದರೆ 3ನೆ ಸ್ಥಾನದಲ್ಲಿರುವ ಅಫ್ಘಾನಿಸ್ತಾನದ ಮೊಹಮ್ಮದ್ ಶಹ್ ಝಾದ್ 28 ಸ್ಟಂಪಿಂಗ್ ಗಳನ್ನು ಮಾಡಿದ್ದಾರೆ.
Next Story





