Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ:...

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ವಿಶೇಷ ಪಿಪಿಯಾಗಿ ಶಾಂತಾರಾಮ್ ಶೆಟ್ಟಿ ಮುಂದುವರಿಕೆ

ಹೈಕೋರ್ಟ್ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ4 July 2018 9:47 PM IST
share
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ವಿಶೇಷ ಪಿಪಿಯಾಗಿ ಶಾಂತಾರಾಮ್ ಶೆಟ್ಟಿ ಮುಂದುವರಿಕೆ

ಉಡುಪಿ, ಜು.4: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಾಗಿ ಉಡುಪಿಯ ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಅವರ ಮುಂದುವರಿಕೆಗೆ ರಾಜ್ಯ ಹೈಕೋರ್ಟ್ ಇಂದು ಹಸಿರು ನಿಶಾನೆ ತೋರಿಸಿದೆ.

ವಿಶೇಷ ಸರಕಾರಿ ಅಭಿಯೋಜಕರ ನೇಮಕವನ್ನು ಪ್ರಶ್ನಿಸಿ ಪ್ರಮುಖ ಆರೋಪಿ ರಾಜೇಶ್ವರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಅರವಿಂದ ಕುಮಾರ್ ಇಂದು ಅಪರಾಹ್ನ 2:30ರ ಸುಮಾರಿಗೆ ತಿರಸ್ಕೃತಗೊಳಿಸಿದ್ದು, ಈ ಮೂಲಕ ಶಾಂತಾರಾಮ್ ಶೆಟ್ಟಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರಕಾರ ಆದೇಶವನ್ನು ಎತ್ತಿ ಹಿಡಿದಿದ್ದಾರೆ.

ಹೈಕೋರ್ಟ್ ಆದೇಶದಂತೆ ಇನ್ನು ಮುಂದೆ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಾದ ಮಂಡನೆಯನ್ನು ರಾಜ್ಯ ಸರಕಾರ ನೇಮಿಸಿದ ವಿಶೇಷ ಸರಕಾರಿ ಅಭಿಯೋಜಕ ಶಾಂತಾರಾಮ್ ಶೆಟ್ಟಿ ಮುಂದುವರಿಸಲಿರುವರು ಎಂದು ಶಾಂತಾರಾಮ್ ಶೆಟ್ಟಿ ಪರ ಹೈಕೋರ್ಟ್ ವಕೀಲ ಸುದೇಶ್ ಕುಮಾರ್ ಆಚಾರ್ಯ ತಿಳಿಸಿದ್ದಾರೆ.

ಪ್ರಕರಣದ ದೂರುದಾರರಾದ ಗುಲಾಬಿ ಶೆಡ್ತಿಯ ಪರ ಹಿರಿಯ ಹೈಕೋರ್ಟ್ ವಕೀಲ ಅಶೋಕ್ ಹಾರ್ನಳ್ಳಿ, ಬಿ.ಎನ್.ಜಗದೀಶ್, ಸರಕಾರದ ಪರವಾಗಿ ಹೆಚ್ಚು ವರಿ ಅಡ್ವಕೇಟ್ ಜನರಲ್ ಎ.ಎಸ್.ಪೊನ್ನಣ್ಣ ವಾದಿಸಿದ್ದರು. ಹಾಗಾಗಿ ಈ ತಿಂಗಳ 6ರಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುವ ಪ್ರಕರಣದ ಸಾಕ್ಷಿ ಹಾಗೂ ಮೊದಲ ತನಿಖಾಧಿಕಾರಿ ಎಸ್.ವಿ.ಗಿರೀಶ್ ಸಾಕ್ಷ ಹೇಳಿಕೆಯನ್ನು ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿಬಾಯಿ ಬದಲು ವಿಶೇಷ ಸರಕಾರಿ ಅಭಿಯೋಜಕ ಶಾಂತಾರಾಮ್ ಶೆಟ್ಟಿ ಪಡೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ಹಿನ್ನೆಲೆ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ವಿಶೇಷ ಅಭಿ ಯೋಜಕರಾಗಿ ಶಾಂತರಾಮ್ ಶೆಟ್ಟಿ ಅವರನ್ನು ರಾಜ್ಯ ಸರಕಾರ 2016ರ ಅ.26ರಂದು ನೇಮಕ ಮಾಡಿತ್ತು. ಈ ಆದೇಶದ ವಿರುದ್ಧ ಪ್ರಕರಣದ ಆರೋಪಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಡ್ತಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ 2018ರ ಜ.31ರಂದು ತಡೆಯಾಜ್ಞೆಯನ್ನು ತೆರವುಗೊಳಿಸಿ ಈ ಬಗ್ಗೆ ಅಕ್ಷೇಪ ಗಳಿದ್ದರೆ ಸರಕಾರಕ್ಕೆ ಸಲ್ಲಿಸುವಂತೆ ರಾಜೇಶ್ವರಿ ಶೆಟ್ಟಿಗೆ ಸೂಚಿಸಿತು.

ಅದರಂತೆ ರಾಜೇಶ್ವರಿ ಶೆಟ್ಟಿ ವಿಶೇಷ ಅಭಿಯೋಜಕರ ನೇಮಕ ಕುರಿತ ಆಕ್ಷೇಪಣೆಯನ್ನು ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯ ಗೃಹ ಕಾರ್ಯದರ್ಶಿಗೆ ಸಲ್ಲಿಸಿ ದ್ದರು. ಈ ಆಕ್ಷೇಪಣೆಗೆ ಪ್ರತಿಯಾಗಿ ಗುಲಾಬಿ ಶೆಡ್ತಿ ತನ್ನ ಆಕ್ಷೇಪಣೆಯನ್ನು ಫೆ.22ರಂದು ಸಲ್ಲಿಸಿದ್ದರು. ರಾಜೇಶ್ವರಿ ಶೆಟ್ಟಿಯ ಅರ್ಜಿಯನ್ನು ತಿರಸ್ಕರಿಸಿದ ಗೃಹ ಇಲಾಖೆಯು ಶಾಂತಾರಾಮ್ ಶೆಟ್ಟಿ ಅವರನ್ನು ವಿಶೇಷ ಅಭಿಯೋಜಕರಾಗಿ ಮುಂದುವರೆಸಿ ಆದೇಶ ನೀಡಿತು.

ಶಾಂತಾರಾಮ್ ಶೆಟ್ಟಿ ಅವರನ್ನು ವಿಶೇಷ ಅಭಿಯೋಜಕರಾಗಿ ಮುಂದುವರೆ ಸುವ ಆದೇಶ ನೀಡುವ ಮೊದಲು ಗೃಹ ಇಲಾಖೆ ನನ್ನ ಆಕ್ಷೇಪಣೆಯನ್ನು ಸರಿ ಯಾಗಿ ಪರಿಗಣಿಸಿಲ್ಲ ಎಂಬುದಾಗಿ ಆರೋಪಿಸಿ ರಾಜೇಶ್ವರಿ ಶೆಟ್ಟಿ ಮತ್ತೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಮಾ.20ರಂದು ವಿಶೇಷ ಅಭಿಯೋಜಕರ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X