Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಸುದ್ದಿಗಳ ವಿರುದ್ಧ ಕಣ್ಣೂರು...

ಸುಳ್ಳು ಸುದ್ದಿಗಳ ವಿರುದ್ಧ ಕಣ್ಣೂರು ಜಿಲ್ಲಾಧಿಕಾರಿಯ ‘ಸತ್ಯಮೇವ ಜಯತೇ’

ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಮುಹಮ್ಮದ್ ಅಲಿ

ವಾರ್ತಾಭಾರತಿವಾರ್ತಾಭಾರತಿ4 July 2018 10:55 PM IST
share
ಸುಳ್ಳು ಸುದ್ದಿಗಳ ವಿರುದ್ಧ ಕಣ್ಣೂರು ಜಿಲ್ಲಾಧಿಕಾರಿಯ ‘ಸತ್ಯಮೇವ ಜಯತೇ’

ಕಣ್ಣೂರು, ಜು.4: ಸುಳ್ಳು ಸುದ್ದಿ ಎಂದರೇನು, ಇದರಿಂದ ಆಗುವ ಅಪಾಯಗಳು ಹಾಗೂ ಇವನ್ನು ನಿಗ್ರಹಿಸುವುದು ಹೇಗೆ ಇತ್ಯಾದಿ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ‘ಸತ್ಯಮೇವ ಜಯತೇ’ ಎಂಬ ಅಭಿಯಾನವನ್ನು ಕೇರಳ ಕಣ್ಣೂರಿನ ಜಿಲ್ಲಾಧಿಕಾರಿ ಮೀರ್ ಮುಹಮ್ಮದ್ ಅಲಿ ಆರಂಭಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೆಲವು ಗುಣವಿಶೇಷಗಳನ್ನು ಬೆಳೆಸಲು, ಅವರಲ್ಲಿ ಜೀವನಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂತರ್‌ಜಾಲದಲ್ಲಿ ಲಭ್ಯವಾಗುವ ಮಾಹಿತಿಗಳು ಹೇಗಿರುತ್ತವೆ ಮತ್ತು ಸುಳ್ಳು ಹಾಗೂ ಸತ್ಯದ ನಡುವಿನ ವ್ಯತ್ಯಾಸವನ್ನು ಗುರುತಿಸುವುದನ್ನು ವಿದ್ಯಾರ್ಥಿಗಳಿಗೆ ಕಳುಹಿಸಿಕೊಡುವ ಉದ್ದೇಶವಿದೆ ಎಂದು ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಕಣ್ಣೂರಿನಲ್ಲಿ ಸುಳ್ಳು ಸುದ್ದಿಗಳ ಬಗ್ಗೆ ಈಗ ಜಾಗೃತೆ ವಹಿಸಲಾಗುತ್ತಿದೆ. ನಿಪಾಹ್ ವೈರಸ್ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕೆಲ ದಿನಗಳ ಹಿಂದೆ ಕಣ್ಣೂರಿನಲ್ಲಿ ಬಂಧಿಸಲಾಗಿದೆ.

 ಕಳೆದ ವರ್ಷ ರುಬೆಲ್ಲಾ ಚುಚ್ಚುಮದ್ದು ನೀಡುವ ಅಭಿಯಾನದ ಬಗ್ಗೆ ಅಪಪ್ರಚಾರ ನಡೆಸಿದ ಕಾರಣ ಹೆತ್ತವರು ತಮ್ಮ ಮಕ್ಕಳಿಗೆ ಚುಚ್ಚುಮದ್ದು ಹಾಕಿಸಿಕೊಳ್ಳಲು ನಿರಾಕರಿಸಿರುವ ಘಟನೆಯನ್ನು ಅಲಿ ಉಲ್ಲೇಖಿಸಿದ್ದಾರೆ. ಹೆಣ್ಣುಮಕ್ಕಳಿಗೆ ಚುಚ್ಚುಮದ್ದು ಹಾಕಿಸಿಕೊಂಡರೆ ಮುಂದೆ ಅವರು ಗರ್ಭ ಧರಿಸಲು ಸಾಧ್ಯವಾಗದು ಎಂಬ ಸುಳ್ಳು ಸುದ್ದಿ ಆಗ ಹಬ್ಬಿತ್ತು. ಆದರೆ ವಾಸ್ತವವಾಗಿ, ಚುಚ್ಚುಮದ್ದು ಹಾಕಿಸಿಕೊಳ್ಳದಿದ್ದರೆ ಹುಟ್ಟುವಾಗಲೇ ಶಿಶುಗಳು ಸಾಯುವ ಸಾಧ್ಯತೆ ಹೆಚ್ಚಿರುತ್ತದೆ ಎಂದವರು ಹೇಳಿದ್ದಾರೆ.

8ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಜೂನ್ 13ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯ 150 ಸರಕಾರಿ ಶಾಲೆಗಳ ಒಬ್ಬೊಬ್ಬ ಶಿಕ್ಷಕರಿಗೆ ತಿಂಗಳಾವಧಿಯ ತರಬೇತಿ ನೀಡಲಾಗುವುದು. ಬಳಿಕ ಅವರು ತಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಾರೆ.

ಜುಲೈ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಅಭಿಯಾನ ಜಾರಿಯಾಗುತ್ತದೆ ಎಂದವರು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಇಂಟರ್‌ನೆಟ್‌ನಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಆಗುವ ಸಮಸ್ಯೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಲಾಗುವುದು. ಎರಡನೇ ಹಂತದಲ್ಲಿ ‘ಕ್ಲಿಕ್‌ಬೈಟ್’ ಬಗ್ಗೆ ಮಾಹಿತಿ ನೀಡಲಾಗುವುದು(ಅತ್ಯಾಕರ್ಷಕ ರೀತಿಯ ಪ್ರಚಾರದಿಂದ ವೀಕ್ಷಕರನ್ನು ಆಕರ್ಷಿಸಿ, ವೆಬ್‌ಸೈಟ್‌ನ ಬಗ್ಗೆ ಕುತೂಹಲ ಮೂಡಿಸಿ ಅವನ್ನು ವೀಕ್ಷಿಸಲು ಪ್ರೇರೇಪಿಸುವ ವೆಬ್‌ಸೈಟ್‌ಗಳು) . ಅಲ್ಲದೆ ಕೆಲವು ಸುದ್ದಿಗಳನ್ನು ವಿದ್ಯಾರ್ಥಿಗಳಿಗೆ ನೀಡಿ, ಅವು ಸುಳ್ಳು ಸುದ್ದಿಯೇ ಎಂದು ಪತ್ತೆಹಚ್ಚಲು ತಿಳಿಸಲಾಗುವುದು. ಮಾಹಿತಿಗಳ ಮೂಲವನ್ನು ಕಳುಹಿಸುವಂತೆ ಸುದ್ದಿ ಕಳುಹಿಸಿದ ವ್ಯಕ್ತಿಗೆ ತಿಳಿಸಲಾಗುವುದು. ಸುದ್ದಿಗಳ ಮೂಲ ಕಳುಹಿಸಲು ಆತ ವಿಫಲವಾದರೆ ಆಗ ವಿದ್ಯಾರ್ಥಿಗಳಿಗೆ ವಾಸ್ತವ ಮಾಹಿತಿಯನ್ನು ಕಲೆಹಾಕಿ ನೈಜ ಸುದ್ದಿ ಸಂಗ್ರಹಿಸಲು ತಿಳಿಸಲಾಗುತ್ತದೆ ಎಂದು ಅಲಿ ತಿಳಿಸಿದ್ದಾರೆ.

ಭವಿಷ್ಯದಲ್ಲಿ ಇನ್ನಷ್ಟು ಶಾಲೆಗಳಲ್ಲಿ ಈ ಕಾರ್ಯಕ್ರಮ ಮುಂದುವರಿಯಲಿದೆ. ಮಲಯಾಳಂ ಭಾಷೆಯಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ಹೆಚ್ಚಿನ ಜನರಿಗೆ ತಲುಪಿಸಲಾಗುವುದು ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X