ಸಾಗರ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಮೃತ್ಯು
ಸಾಗರ, ಜು.5: ಇಲ್ಲಿನ ಶರಾವತಿ ಹಿನ್ನೀರಿನ ಬಿದರೂರು ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಕುಟ್ಟಿ ಸಾದಿಕ್ (36) ಎಂಬವರು ಮೃತಪಟ್ಟಿದ್ದಾರೆ.
ಪೈಂಟರ್ ಕೆಲಸ ನಿರ್ವಹಿಸುತ್ತಿದ್ದ ಇವರು ಹವ್ಯಾಸಕ್ಕಾಗಿ ಮೀನು ಹಿಡಿಯುತ್ತಿದ್ದು, ಬುಧವಾರ ಮಧ್ಯಾಹ್ನದ ವೇಳೆ ಒಬ್ಬರೆ ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕಾರ್ಗಲ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಹೊರ ತೆಗೆದಿದ್ದಾರೆ. ಗುರುವಾರ ಕಾರ್ಗಲ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸ್ವಯಂ ಪ್ರೇರಿತವಾಗಿ ಬ್ಯಾಂಕ್ ಸಹಿತ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವು. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story