ಮೈಸೂರು: ಬಸ್-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಮೈಸೂರು,ಜು.5: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹುಲ್ಲೇನಹಳ್ಳಿ ಬಳಿ ನಡೆದಿದೆ.
ಮೃತರನ್ನು ಹುಣಸೂರು ತಾಲೂಕಿನ ಮಧುಗಿರಿ ಕೊಪ್ಪಲು ದೇವು (28) ಎಂದು ಗುರುತಿಸಲಾಗಿದ್ದು, ಅವರು ಟೈಟಾನ್ ವಾಚ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಫ್ಯಾಕ್ಟರಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
Next Story





