ಸುಂಟಿಕೊಪ್ಪ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಸುಂಟಿಕೊಪ್ಪ, ಜು.5: ನಾಕೂರು ಶಿರಂಗಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳ್ಳೂರು ಗ್ರಾಮದ ನಿವಾಸಿ ದಿಲೀಪ್ ಎಂಬವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.
ಮಳ್ಳೂರು ಗ್ರಾಮದ ಕಾಫಿ ಬೆಳೆಗಾರರಾದ ಹೆಚ್.ಬಿ. ಗಣೇಶ್ ಎಂಬವರ ಪುತ್ರ ದಿಲೀಪ್ (37) ರಾತ್ರಿ ವೇಳೆ ಮನೆಯ ಸಮೀಪದ ತೋಟದ ಮರವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ತೆರಳಿ ಸ್ಥಳಕೆ ಮಹಜರು ಮೃತ ದೇಹವನ್ನು ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು.
Next Story