ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮುಂದುವರಿಸಲು ಜೆಡಿಯು ನಿರ್ಧಾರ
ಹೊಸದಿಲ್ಲಿ,ಜು.8: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿಯನ್ನುಮುಂದುವರಿಸುವುದಾಗಿ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಘೋಷಿಸಿದೆ ಎಂದು ವರದಿಯಾಗಿದೆ.
ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿದ ಬಳಿಕ ಈ ನಿರ್ಧಾರ ಪ್ರಕಟಗೊಂಡಿದೆ ಎನ್ನಲಾಗಿದ್ದು, ಜೆಡಿಯು ರಾಷ್ಟ್ರೀಯ ಕಾರ್ಯದರ್ಶಿಗಳು, ರಾಜ್ಯಾಧ್ಯಕ್ಷರು, ಬಿಹಾರದ ಹಿರಿಯ ನಾಯಕರು ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ 17ರಿಂದ 18 ಸ್ಥಾನಗಳ ಬೇಡಿಕೆಯಿಡಲು ಜೆಡಿಯು ನಿರ್ಧರಿಸಿದೆ. ತಲಾ 17 ಲೋಕಸಭಾ ಸ್ಥಾನಗಳಲ್ಲಿ ಜೆಡಿಯು, ಬಿಜೆಪಿ ಸ್ಪರ್ಧಿಸುವುದು ಮತ್ತು ಇತರ ಆರು ಸ್ಥಾನಗಳನ್ನು ಇತರ ಮಿತ್ರಪಕ್ಷಗಳಿಗೆ ನೀಡುವ ಕುರಿತು ಜೆಡಿಯು ಚಿಂತನೆ ನಡೆಸಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರೊಂದಿಗೆ ನಿತೀಶ್ ಕುಮಾರ್ ಸಮಾಲೋಚನೆ ನಡೆಸಲಿದ್ದಾರೆ.
Next Story