ಪ್ರತ್ಯೇಕ ಪ್ರಕರಣ: ಇಬ್ಬರು ಯುವಕರು ಆತ್ಮಹತ್ಯೆ

ಬೆಂಗಳೂರು, ಜು.8: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಗರ ವ್ಯಾಪ್ತಿಯಲ್ಲಿ ನಡೆದಿದೆ.
ಜೀವನದಲ್ಲಿನ ಜಿಗುಪ್ಸೆಯಿಂದ ನಗರದ ಲಿಂಗರಾಜಪುರದ ಬಾಗಲೂರು ಲೇಔಟ್‌ನ ಭಾಸ್ಕರ್(32) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವೃತ್ತಿಯಲ್ಲಿ ಪೇಂಟರ್ ಆಗಿದ್ದ ಇವರು, ಶನಿವಾರ ರಾತ್ರಿ 10ರ ಸುಮಾರಿಗೆ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒರಿಸ್ಸಾ ಮೂಲದ ಟೈಲರ್ ವೇದಪ್ರಕಾಶ್ ಎಂಬಾತ ಶನಿವಾರ ರಾತ್ರಿ 8ರ ವೇಳೆ ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿಯ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಕೆಲ ವರ್ಷಗಳ ಹಿಂದೆ ಕೆಲಸ ಅರಸಿ ನಗರಕ್ಕೆ ಬಂದಿದ್ದ ಅವರು ಮುನೇಶ್ವರ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಒಂಟಿಯಾಗಿದ್ದ ಅವರು ನೇಣಿಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಬೊಮ್ಮನಹಳ್ಳಿ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.







