ಮಂಡ್ಯ: ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತ್ಯು

ಮಂಡ್ಯ, ಜು.8: ಪಟ್ಟಣದ ವಿಜಯ ಕಾಲೇಜಿನ ಕಟ್ಟಡ ನಿರ್ಮಾಣದ ಕೆಲಸ ಮಾಡುವ ವೇಳೆ ವಿದ್ಯುತ್ ಸ್ಪರ್ಶವಾಗಿ ಕೂಲಿಕಾರ್ಮಿಕ ಸಾವನ್ನಪ್ಪಿದ್ದಾರೆ.
ಶ್ರೀರಂಗಪಟ್ಟಣದ ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ನಿವಾಸಿ ಸ್ವಾಮಿ(31) ಮೃತ ವ್ಯಕ್ತಿ. ಭಾನುವಾರ ಬೆಳಗ್ಗೆ ಎಂದಿನಂತೆ ಕಟ್ಟಡದ ಕೆಲಸ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಈ ಘಟನೆ ನಡೆದಿದೆ.
ಅಸ್ವಸ್ಥಗೊಂಡ ಸ್ವಾಮಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





