Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರ ಪ್ರಾರಂಭವಾಗಲಿದೆ ರಾಮಾಯಣ...

ಶೀಘ್ರ ಪ್ರಾರಂಭವಾಗಲಿದೆ ರಾಮಾಯಣ ಎಕ್ಸ್‌ಪ್ರೆಸ್ ರೈಲು

ಇದರ ವಿಶೇಷತೆಯೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ8 July 2018 10:02 PM IST
share
ಶೀಘ್ರ ಪ್ರಾರಂಭವಾಗಲಿದೆ ರಾಮಾಯಣ ಎಕ್ಸ್‌ಪ್ರೆಸ್ ರೈಲು

ಹೊಸದಿಲ್ಲಿ, ಜು.8: ಅಯೋಧ್ಯೆಯಿಂದ ರಾಮೇಶ್ವರಂ ಮೂಲಕ ಶ್ರೀಲಂಕಾದ ಕೊಲಂಬೋವರೆಗೆ ರಾಮಾಯಣ ಪರಿಕ್ರಮವನ್ನು ಸುತ್ತುವ ವಿಶೇಷ ಪ್ರವಾಸೀ ರೈಲು ಪ್ರಯಾಣವನ್ನು ಆರಂಭಿಸಲು ಭಾರತೀಯ ರೈಲ್ವೇ ನಿರ್ಧರಿಸಿದೆ. ಹಿಂದೂ ಪುರಾಣದಲ್ಲಿ ರಾಮಾಯಣಕ್ಕೆ ಸಂಬಂಧಿಸಿದ ನಗರಗಳನ್ನು ಸಂದರ್ಶಿಸುವ ಯೋಜನೆ ಇದಾಗಿದ್ದು, ಈ ವಿಶೇಷ ರೈಲಿಗೆ ಶ್ರೀರಾಮಾಯಣ ಎಕ್ಸ್‌ಪ್ರೆಸ್ ಎಂದು ಹೆಸರಿಡಲಾಗಿದೆ. ರಾಮೇಶ್ವರಂನ ಬಳಿಕ ಕೊಲಂಬೋಕ್ಕೆ ತೆರಳ ಬಯಸುವ ಪ್ರಯಾಣಿಕರು ಚೆನ್ನೈಯಿಂದ ರೈಲಿನ ಮೂಲಕ ಶ್ರೀಲಂಕಾ ತಲುಪಿ ಅಲ್ಲಿಂದ ಪ್ರಯಾಣ ಮುಂದುವರಿಸುವ ವ್ಯವಸ್ಥೆಯಿದೆ. ಪ್ರತಿಯೊಬ್ಬ ಪ್ರವಾಸಿ (ಭಾರತ ಪ್ರವಾಸಕ್ಕೆ ಮಾತ್ರ) 15,120 ರೂ. ಶುಲ್ಕ ಪಾವತಿಸಬೇಕು. 800 ಆಸನಗಳಿರುವ ರೈಲು ಸೇವೆಗೆ ನವೆಂಬರ್ 14ರಂದು ದಿಲ್ಲಿಯಲ್ಲಿ ಚಾಲನೆ ನೀಡಲಾಗುವುದು. 16 ದಿನಗಳಲ್ಲಿ ರಾಮಾಯಣ ಪರಿಕ್ರಮವನ್ನು ಈ ರೈಲಿನ ಮೂಲಕ ಸುತ್ತಬಹುದು. ಪ್ರಯಾಣಿಕರಿಗೆ ರೈಲಿನಲ್ಲೇ ಊಟ-ಉಪಾಹಾರದ ವ್ಯವಸ್ಥೆಯಿದೆ. ಭೇಟಿ ನೀಡುವ ಪ್ರದೇಶಗಳಲ್ಲಿ ಪ್ರಯಾಣಿಕರಿಗೆ ರಾತ್ರಿ ತಂಗುವ ಮತ್ತು ಸ್ನಾನಾದಿಗಳನ್ನು ಪೂರೈಸುವ ವ್ಯವಸ್ಥೆ ಇರುತ್ತದೆ.

ಮಾರ್ಗಮಧ್ಯದಲ್ಲಿ ಸಿಗುವ ಪ್ರೇಕ್ಷಣೀಯ ಸ್ಥಳಗಳ ಸಂದರ್ಶನಕ್ಕೂ ಅವಕಾಶವಿದ್ದು, ಐಆರ್‌ಸಿಟಿಸಿಯ ಯಾತ್ರಾ ವ್ಯವಸ್ಥಾಪಕರು ರೈಲಿನಲ್ಲಿ ಪ್ರಯಾಣಿಸಿ ಪ್ರಯಾಣಿಕರಿಗೆ ಅಗತ್ಯದ ನೆರವು ನೀಡಲಿದ್ದಾರೆ ಎಂದು ಐಆರ್‌ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ದಿಲ್ಲಿಯ ಸಫ್ದರ್‌ಜಂಗ್ ಸ್ಟೇಷನ್‌ನಿಂದ ಹೊರಡುವ ರೈಲಿಗೆ ಅಯೋಧ್ಯೆ(ಹಿಂದೂ ಪುರಾಣದ ಪ್ರಕಾರ ರಾಮನ ಜನ್ಮಸ್ಥಳ)ಯಲ್ಲಿ ಪ್ರಥಮ ನಿಲುಗಡೆಯಿದೆ. ಅಲ್ಲಿಂದ ಹನುಮಾನ್ ಗಢಿ, ರಾಮ್‌ಕೋಟ್ ಮತ್ತು ಕನಕಭವನ ದೇವಳ ಸಂದರ್ಶಿಸಲು ವ್ಯವಸ್ಥೆಯಿದೆ. ಬಳಿಕ ನಂದೀಗ್ರಾಮ್, ಸೀತಾಮಡಿ, ಜನಕಪುರ, ವಾರಾಣಸಿ, ಪ್ರಯಾಗ, ಶೃಂಗವೇರ್‌ಪುರ, ಚಿತ್ರಕೂಟ, ನಾಸಿಕ್, ಹಂಪಿ ಮತ್ತು ರಾಮೇಶ್ವರಂನಲ್ಲಿ ನಿಲುಗಡೆಯಿದೆ. ರೈಲು ನಿಲ್ದಾಣದಿಂದ ಯಾತ್ರಾಸ್ಥಳಕ್ಕೆ ರಸ್ತೆ ಮೂಲಕ ಸಾಗುವ ಪ್ರಯಾಣ ವ್ಯವಸ್ಥೆಯನ್ನು ರೈಲ್ವೇ ಇಲಾಖೆ ಮಾಡಲಿದೆ.

  ಶ್ರೀಲಂಕಾ ಸರಣಿಯ ಪ್ರಯಾಣದಲ್ಲಿ ಆಸಕ್ತಿ ಇರುವ ಪ್ರಯಾಣಿಕರನ್ನು ಚೆನ್ನೈಗೆ ಕರೆದೊಯ್ಯಲಾಗುವುದು. ಅಲ್ಲಿಂದ ವಿಮಾನದ ಮೂಲಕ ಕೊಲಂಬೋಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಯೋಜನೆಯಿಂದ ಉತ್ತಮ ಆದಾಯವನ್ನು ನಿರೀಕ್ಷಿಸುತ್ತಿದ್ದೇವೆ. ಪ್ರಥಮ ಯಾತ್ರೆಗೆ ಜನತೆಯ ಪ್ರತಿಕ್ರಿಯೆ ಗಮನಿಸಿದ ಬಳಿಕ ರೈಲನ್ನು ವರ್ಷಕ್ಕೆ ಎಷ್ಟು ಬಾರಿ ಓಡಿಸಬಹುದು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ಐಆರ್‌ಸಿಟಿಸಿ ನಿರ್ದೇಶಕಿ (ಪ್ರವಾಸೋದ್ಯಮ) ರಜನಿ ಹಸೀಜ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X