ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿವಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಗಳೂರು, ಜು.8: ನಗರದ ಉರ್ವಸ್ಟೋರ್ ಬಳಿಯಿರುವ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವ ವಿದ್ಯಾನಿಲಯದ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ 60 ವಿದ್ಯಾರ್ಥಿಗಳನ್ನು ರವಿವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಬಾಸ್ಕೋಸ್ ಪಿಯು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಪ್ರೊ.ಎಸ್.ಎಸ್.ಬಾಸ್ಕೋ, ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಪಿ.ಎಲ್.ಧರ್ಮ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಸಸಿಹಿತ್ಲು, ಎಂ.ಎಸ್.ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಪರಿಣಿತ ಎಂ.ಡಿ., ಜಿಲ್ಲಾ ಮಾಧ್ಯಮಿಕ ಶಿಕ್ಷಾ ಅಭಿಯಾನದ ಪ್ರಾಜೆಕ್ಟೃ್ ಕೋ-ಆರ್ಡಿನೇಟರ್ ಗೀತಾ ದೇವದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬ್ರಹ್ಮಕುಮಾರಿ ಜಯಕ್ಕ, ವಿಜಯಲಕ್ಷ್ಮೀ, ಶರಣಮಕ್ಕ ಉಪಸ್ಥಿತರಿದ್ದರು. ಬ್ರಹ್ಮಕುಮಾರಿ ರೇವತಿ ಸ್ವಾಗತಿಸಿದರು.
Next Story





