ಮಂಗಳೂರು: ಬಿಜೆಪಿಯಿಂದ ಸ್ವಚ್ಛತಾ ಅಭಿಯಾನ
ಮಂಗಳೂರು, ಜು.8: ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪುರಭವನದ ಬಳಿ ರವಿವಾರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಬಿಜೆಪಿ ಕಾರ್ಯಕರ್ತರೊಂದಿಗೆ ವಿದ್ಯಾರ್ಥಿಗಳ ತಂಡ ಕೂಡ ಸ್ವಚ್ಛತಾ ಕಾರ್ಯಕ್ಕೆ ಸಾಥ್ ನೀಡಿತ್ತು.
ಶಾಸಕ ಡಿ.ವೇದವ್ಯಾಸ ಕಾಮತ್, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ ಸಿಂಹ ನಾಯಕ್, ಕಾರ್ಪೊರೇಟರ್ ರಾಜೇಂದ್ರ, ಬಿಜೆಪಿ ಪ್ರಮುಖರಾದ ನಿತಿನ್ ಕುಮಾರ್, ಭಾಸ್ಕರಚಂದ್ರ ಶೆಟ್ಟಿ, ರವಿಶಂಕರ ಮಿಜಾರು, ಗುರುಚರಣ್ ಮತ್ತಿತರರು ಉಪಸ್ಥಿತರಿದ್ದರು.
Next Story





