Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಪ್ರವಾಹಕ್ಕೆ ಸಿಲುಕಿ ಕೊಚ್ಚಿ...

ಶಿವಮೊಗ್ಗ: ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋದ ವಿದ್ಯಾರ್ಥಿನಿ

ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಮುಂದುವರೆದ ಮಳೆಯ ಆರ್ಭಟ

ವಾರ್ತಾಭಾರತಿವಾರ್ತಾಭಾರತಿ9 July 2018 7:19 PM IST
share
ಶಿವಮೊಗ್ಗ: ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋದ ವಿದ್ಯಾರ್ಥಿನಿ

ಶಿವಮೊಗ್ಗ,ಜು.9: ಶಿವಮೊಗ್ಗ ಜಿಲ್ಲೆಯ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ವರ್ಷಧಾರೆಯ ಆರ್ಭಟ ಮುಂದುವರಿದಿದೆ. ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಗಳ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಸೋಮವಾರ ಬೆಳಿಗ್ಗೆ ತೀರ್ಥಹಳ್ಳಿ ತಾಲೂಕಿನಲ್ಲಿ ಶಾಲಾ ಬಾಲಕಿಯೋರ್ವಳು ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. 

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಗುಡ್ಡೆಕೆರೆ ಬಳಿಯ ಕೆಂದಾಳುಬೈಲುವಿನ ದೊಡ್ಲುಮನೆ ಪ್ರದೇಶ ಬಳಿ ಕಾಲು ಸೇತುವೆ ದಾಟಲು ಯತ್ನಿಸಿದ ಶಾಲಾ ಬಾಲಕಿಯೋರ್ವಳು ನೀರುಪಾಲಾಗಿರುವ ಘಟನೆ ನಡೆದಿದೆ. ಆಶಿಕಾ (14) ನೀರುಪಾಲಾದ ಬಾಲಕಿ ಎಂದು ಗುರುತಿಸಲಾಗಿದೆ. 

ಬಾಲಕಿಯು ಗುಡ್ಡೇಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ಅಭ್ಯಾಸ ಮಾಡುತ್ತಿದ್ದಳು. ಧಾರಾಕಾರ ಮಳೆಯ ಕಾರಣದಿಂದ ಸೋಮವಾರ ತೀರ್ಥಹಳ್ಳಿ ತಾಲೂಕಿನ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಾಹಿತಿ ತಿಳಿಯದ ಬಾಲಕಿಯು ಎಂದಿನಂತೆ ಶಾಲೆಗೆ ತೆರಳಿದ್ದಳು. ರಜೆಯಿರುವ ವಿಷಯ ಗೊತ್ತಾಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಹಳ್ಳದ ಮೇಲಿನ ಕಾಲು ಸೇತುವೆ ದಾಟುವ ವೇಳೆ, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಬಾಲಕಿಯು ತನ್ನ ತಾಯಿಯೊಂದಿಗೆ ಮನೆಗೆ ಆಗಮಿಸುವ ವೇಳೆ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೊಚ್ಚಿ ಹೋಗಿರುವ ಬಾಲಕಿಯ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಂಜೆಯವರೆಗೂ ಬಾಲಕಿಯ ಸುಳಿವು ಲಭ್ಯವಾಗಿಲ್ಲ. ನಿರಂತರವಾಗಿ ಸುರಿಯುತ್ತಿರುವ ಮಳೆಯು ಶೋಧ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. 

ಆರ್ಭಟ: ಜಿಲ್ಲೆಯ ಅರೆ ಮಲೆನಾಡು ಭಾಗಗಳಲ್ಲಿ ಸೋಮವಾರ ಮಳೆಯ ಆಬ್ಬರ ಕಡಿಮೆಯಾಗಿತ್ತು. ಆದರೆ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ನಿರಂತರ ವರ್ಷಧಾರೆ ಮುಂದುವರಿದಿದೆ. 

ಅಪಾಯ ಮಟ್ಟ: ಜಿಲ್ಲೆಯ ಜೀವ ನದಿಗಳಾದ ತುಂಗಾ, ಭದ್ರಾ, ಶರಾವತಿ, ದಂಡಾವತಿ, ಮಾಲತಿ, ಕುಮದ್ವತಿ ನದಿಗಳು ಮೈದುಂಬಿ ಹರಿಯಲಾರಂಭಿಸಿವೆ. ತುಂಗಾ ನದಿಯು ಹಲವೆಡೆ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತೀರ್ಥಹಳ್ಳಿ ಹಾಗೂ ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿರುವುದು ಕಂಡುಬರುತ್ತಿದೆ. 

ಒಂದೇ ದಿನ ಲಿಂಗನಮಕ್ಕಿಗೆ 4 ಅಡಿ ನೀರು
ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದಿರುವುದರಿಂದ ಶರಾವತಿ ನದಿ ಮೈದುಂಬಿ ಹರಿಯಲಾರಂಭಿಸಿದೆ. ಇದರಿಂದ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿಗೆ ನಿರಂತರವಾಗಿ ಒಳಹರಿವಿನಲ್ಲಿ ಏರಿಕೆ ಕಂಡುಬರಲಾರಂಭಿಸಿದ್ದು, ಸೋಮವಾರ ಬೆಳಿಗ್ಗೆ 8 ಗಂಟೆಯ ಮಾಹಿತಿಯಂತೆ ಕಳೆದ 24 ಗಂಟೆ ಅವಧಿಯಲ್ಲಿ ಜಲಾಶಯದಲ್ಲಿ ನಾಲ್ಕು ಅಡಿಯಷ್ಟು ನೀರು ಸಂಗ್ರಹವಾಗಿದೆ. 

ಶಾಲೆಗಳಿಗೆ ರಜೆ ಘೋಷಣೆ 
ಎಡೆಬಿಡದೆ ಮಳೆಯಾಗುತ್ತಿರುವ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ಪರಿಸ್ಥಿತ ಅವಲೋಕಿಸಿ ಮಂಗಳವಾರ ಕೂಡ ರಜೆ ಮುಂದುವರಿಸಲು ಸ್ಥಳೀಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಉಳಿದಂತೆ ಹೊಸನಗರ ತಾಲೂಕಿನ ನಗರ ಹೋಬಳಿ ಭಾಗದ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಸ್ಥಳೀಯ ಪರಿಸ್ಥಿತಿ ಗಮನಿಸಿ ಶಾಲೆಗಳಿಗೆ ರಜೆ ಘೋಷಣೆಯ ನಿರ್ಧಾರ ಕೈಗೊಳ್ಳುವಂತೆ ತಾಲೂಕು ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಛಾಡೋ ಅವರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X