Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ...

ಉಡುಪಿ: ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ 324.6 ಮಿ.ಮೀ.ಮಳೆ

ಜಿಲ್ಲೆಯಾದ್ಯಂತ ಅಪಾರ ಹಾನಿ: ಡಿಸಿಯಿಂದ ಸರಕಾರಕ್ಕೆ ವರದಿ

ವಾರ್ತಾಭಾರತಿವಾರ್ತಾಭಾರತಿ9 July 2018 8:29 PM IST
share
ಉಡುಪಿ: ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ 324.6 ಮಿ.ಮೀ.ಮಳೆ

ಉಡುಪಿ, ಜು.9: ಜು. 6ರಿಂದ 8ರವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 324.9ಮಿ.ಮೀ. ಮಳೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಆಪಾರವಾದ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಸತತವಾಗಿ ಸುರಿದ ಮಳೆಯಿಂದ ಉಡುಪಿ, ಕಾಪು ಹಾಗೂ ಕಾರ್ಕಳ ತಾಲೂಕಿನ ನದಿ ತೀರದ ಗ್ರಾಮಗಳ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೆರೆ ಪರಿಸ್ಥಿತಿ ತಲೆದೋರಿದೆ.

ಮೂರು ದಿನಗಳಲ್ಲಿ ಯಾವುದೇ ಜೀವಹಾನಿ ಸಂಭವಿಸಿರದಿದ್ದರೂ, ನೆರೆ ನೀರು ಹಲವು ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಇಂದು ರಾಜ್ಯ ಸರಕಾರಕ್ಕೆ ಕಳುಹಿಸಿದ ವರದಿಯಲ್ಲಿ ತಿಳಿಸಿದ್ದಾರೆ.

ಕಂದಾಯ ಇಲಾಖೆ (ವಿಪತ್ತು ಮತ್ತು ನಿರ್ವಹಣೆ) ಕಾರ್ಯದರ್ಶಿಗಳಿಗೆ ಕಳುಹಿಸಿರುವ ವರದಿಯಲ್ಲಿ ಪ್ರತಿ ತಾಲೂಕಿನಲ್ಲಿ ಮೂರು ದಿನಗಳ ಪರಿಸ್ಥಿತಿ, ಆಗಿರುವ ಹಾನಿ, ಕೈಗೊಂಡಿರುವ ಪರಿಹಾರದ ಕ್ರಮಗಳನ್ನು ವಿವರಿಸಲಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದರೆ, ಕೆಲವು ಕಡೆಗಳಲ್ಲಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ನಷ್ಟವುಂಟಾಗಿದೆ. ಆದರೂ ಪರಿಸ್ಥಿತಿಯನ್ನು ಸಮರ್ಥ ರೀತಿಯಲ್ಲಿ ನಿರ್ವಹಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮವಾಗಿ ಜು. 7ರಂದೇ ಎನ್‌ಡಿಆರ್‌ಎಫ್ ತಂಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ನೌಕಾ ತಂಡವನ್ನು ಅಗತ್ಯ ಪರಿಕರಗಳೊಂದಿಗೆ ಜಿಲ್ಲೆಗೆ ಕರೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ. ಉಡುಪಿ ನಗರಸಭಾ ವ್ಯಾಪ್ತಿಯ 75 ಬಡಗುಬೆಟ್ಟು, ಶಿವಳ್ಳಿ ಗ್ರಾಮದ 6 ಕುಟುಂಬ, ಪುತ್ತೂರು ಗ್ರಾಮದ ಕೊಡಂಕೂರಿನ 5 ಕುಟುಂಬ, ಅಂಬಲಪಾಡಿಯ 3, ಕಿದಿಯೂರು ಗ್ರಾಮದ 6, ಉದ್ಯಾವರ ಗ್ರಾಮದ 4, ಕೊರಂಗ್ರಪಾಡಿ ಗ್ರಾಮದ 13 ಕುಟುಂಬಗಳನ್ನು ಆಯಾ ಗ್ರಾಮಗಳಲ್ಲಿ ತೆರೆದ ಗಂಜಿ ಕೇಂದ್ರಗಳಿಗೆ ಕಳುಹಿಸಲಾಗಿದೆ. ಮಳೆ ಹಾಗೂ ನೆರೆ ಹಾವಳಿ ಕಡಿಮೆಯಾದ ಬಳಿಕ ಈ 100ಕ್ಕೂ ಅಧಿಕ ಮಂದಿಯನ್ನು ತಮ್ಮ ತಮ್ಮ ಮನೆಗಳಿಗೆ ಕಳುಹಿಸಲಾಗಿದೆ. ಅಲ್ಲದೇ ತಾಲೂಕಿನ ಹಲವು ಮನೆಗಳಿಗೆ ಮಳೆ-ಗಾಳಿಯಿಂದ ಅಪಾರ ಹಾನಿ ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕಾಪು ತಾಲೂಕಿನಲ್ಲಿ ಉಳಿಯಾರಗೋಳಿ ಗ್ರಾಮದ ಜಲಜ ಪೂಜಾರ್ತಿ ಎಂಬವರ ಕರು ನೆರೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಕೃತಕ ನೆರೆ ಉಂಟಾಗಿದೆ. ನೆರೆ ಪೀಡಿತ ಪ್ರದೇಶದ ಜನರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಬೆಳ್ಳೆ ಗ್ರಾಮದ 6, ಕಟ್ಟಿಂಗೇರಿ ಗ್ರಾಮದ 9, ಯೇಣಗುಡ್ಡೆಯಲ್ಲಿ 7, ಮೂಡಬೆಟ್ಟು ಗ್ರಾಮದಲ್ಲಿ 5, ಇನ್ನಂಜೆ ಗ್ರಾಮದ 3, ಪಾಂಗಾಳದ 20, ಬೆಳಪು ಗ್ರಾಮದ 3, ಕುರ್ಕಾಲು ಗ್ರಾಮದ 27, ಪಾದೆಬೆಟ್ಟು 4, ಪಲಿಮಾರು 24, ನಂದಿಕೂರು 40, ಹೆಜಮಾಡಿ 75, ತೆಂಕ 6, ಕುತ್ಯಾರು 5, ಶಿರ್ವ 10, ಉಳಿಯಾರಗೋಳಿ 40 ಹಾಗೂ ಮಜೂರು ಗ್ರಾಮದ 45 ಮಂದಿ ಸೇರಿದಂತೆ ಒಟ್ಟು 335 ಮಂದಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

ಇವರಿಗಾಗಿ ಪಲಿಮಾರು, ಕಟಪಾಡಿ, ಮಜೂರು ಗ್ರಾಮಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿತ್ತು. ಕಾಪುವಿನ ಶ್ರೀಲಕ್ಷ್ಮೀಜನಾರ್ದನ ದೇವಸ್ಥಾನದಲ್ಲೂ ಒಂದು ಗಂಜಿ ಕೇಂದ್ರ ತೆರೆಯಲಾಗಿತ್ತು. ಕೆಲವು ಗ್ರಾಮಗಳ ಇನ್ನೂ ಹಲವು ಮಂದಿ ತಮ್ಮ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದಿದ್ದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಅಂದಾಜು 11.85 ಲಕ್ಷ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ 9 ಮನೆಗಳು ಜಲಾವೃತಗೊಂಡಿದ್ದು ಇಲ್ಲಿನ 27 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಿ ಇವರಿಗೆಲ್ಲಾ ಅಲ್ಲಿನ ದೇವಸ್ಥಾನದಲ್ಲಿ ಭೋಜನ ವ್ಯವಸ್ಥೆ ಮಾಡಲಾಯಿತು. ಮಳೆ ಹಾಗೂ ನೆರೆ ಇಳಿದ ಬಳಿಕ ಅವರನ್ನು ಮನೆಗಳಿಗೆ ಕಳುಹಿಸಲಾಯಿತು. ಅದೇ ರೀತಿ ಸೂಡ ಗ್ರಾಮದಲ್ಲಿ 4 ಮನೆಗಳ ಜನರನ್ನು ರಕ್ಷಿಸಲಾಯಿತು ಎಂದು ವರದಿಯಲ್ಲಿ ವಿವರಿಸಲಾಗಿದೆ.

ಜಿಲ್ಲೆಯಲ್ಲಿ 3.71 ಕೋಟಿ ರೂ.ನಷ್ಟದ ಅಂದಾಜು, 79.57 ಲಕ್ಷ ಪರಿಹಾರ

ಜಿಲ್ಲೆಯಲ್ಲಿ ಕಳೆದ ಎ.1ರಿಂದ ಜು.9ರವರೆಗೆ ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಸುಮಾರು 3.71 ಕೋಟಿ ರೂ.ಗಳಷ್ಟು ಆಸ್ತಿಪಾಸ್ತಿ, ಸೊತ್ತುಗಳಿಗೆ ಹಾನಿಯನ್ನು ಅಂದಾಜಿಸಲಾಗಿದ್ದು, ಈವರೆಗೆ ಒಟ್ಟು 79.57 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ವಿವರಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 4 ಮಾನವ ಜೀವ ಹಾನಿಯಾಗಿದ್ದು, ಇವುಗಳಿಗೆ 20,00,000 ರೂ. ಪರಿಹಾರವನ್ನು ವಿತರಿಸಲಾಗಿದೆ. ಸಿಡಿಲಿನಿಂದ ಇಬ್ಬರು ಗಾಯಗೊಂಡಿದ್ದು 16,900ರೂ. ಪರಿಹಾರ ನೀಡಲಾಗಿದೆ. 14 ಜಾನುವಾರು ಗಳ ಜೀವಹಾನಿಯಾಗಿದ್ದು 3,67,000ರೂ. ನಷ್ಟದಲ್ಲಿ 9 ಜಾನುವಾರುಗಳಿಗೆ 1,79,000ರೂ. ಪರಿಹಾರ ವಿತರಿಸಲಾಗಿದೆ. ತೋಟಗಾರಿಕಾ ಬೆಳೆ ಹಾನಿಯ 198 ಪ್ರಕರಣಗಳಲ್ಲಿ 21,99,800 ನಷ್ಟದ ಅಂದಾಜು ಮಾಡಲಾಗಿದ್ದು, ಇವುಗಳಲ್ಲಿ 161 ಪ್ರಕರಣಗಳಲ್ಲಿ ಒಟ್ಟು 5,81,029 ರೂ.ಗಳ ಪರಿಹಾರ ವಿತರಿಸಲಾಗಿದೆ.

ಮಳೆಯಿಂದ ವಾಸ್ತವ್ಯದ 47 ಪಕ್ಕಾ ಮನೆಗಳಿಗೆ 40,46,214ರೂ. ನಷ್ಟ ವಾಗಿದ್ದು, ಇವುಗಳಲ್ಲಿ ಒಟ್ಟು 36 ಪ್ರಕರಣಗಳಲ್ಲಿ 2,92,900 ರೂ. ಪರಿಹಾರ ವಿತರಿಸಲಾಗಿದೆ. ವಾಸ್ತವ್ಯದ 759 ಮನೆಗಳಿಗೆ ಭಾಗಶ: ಹಾನಿಯಾಗಿದ್ದು  2,48,94,579 ರೂ. ನಷ್ಟದ ಅಂದಾಜು ಮಾಡಲಾಗಿದೆ. ಇವುಗಳಲ್ಲಿ 604 ಪ್ರಕರಣಗಳಲ್ಲಿ 48,47,053 ರೂ.ಗಳ ಪರಿಹಾರ ನೀಡಲಾಗಿದೆ. ಅಲ್ಲದೇ ಮಳೆಯಿಂದ 8 ಕಚ್ಛಾ ಮನೆ ಸಂಪೂರ್ಣ ಹಾನಿಯಾಗಿ 4,70,100ರೂ. ನಷ್ಚ ವಾಗಿದ್ದು 3 ಮನೆಗಳಿಗೆ 9,600ರೂ. ಪರಿಹಾರ ವಿತರಣೆಯಾಗಿದೆ.

ಉಳಿದಂತೆ ಅಂಗನವಾಡಿ, ಆವರಣಗೋಡೆ, ಬಾವಿ ಕುಸಿತದ 29 ಪ್ರಕರಣ ಗಳಲ್ಲಿ 29.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ಒಟ್ಟಾರೆ ಯಾಗಿ ಜಿಲ್ಲೆಯಲ್ಲಿ ಈವರೆಗೆ 1076 ಪ್ರಕರಣಗಳಲ್ಲಿ 3,71,46,443 ರೂ. ನಷ್ಟವನ್ನು ಅಂದಾಜಿಸಲಾಗಿದ್ದು, ಇವುಗಳಲ್ಲಿ 828 ಪ್ರಕರಣಗಳಲ್ಲಿ ಒಟ್ಟು 79,57,082 ರೂ. ಪರಿಹಾರವನ್ನು ವಿತರಿಸಲಾಗಿದೆ ಎಂದು ಸರಕಾರಕ್ಕೆ ನೀಡಲಾದ ವರದಿಯಲ್ಲಿ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X