ಶಿವರಾಮ ಜೋಗಿಗೆ ಸಾಮಗ ಪ್ರಶಸ್ತಿ ಪ್ರದಾನ

ಉಡುಪಿ, ಜು.9: ಎಲ್ಲ ಭಾಷೆಗಳಿಗೂ ವಿಭಿನ್ನವಾದ ತುಳುಭಾಷೆ ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ಆದುದರಿಂದ ತುಳು ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಪರ್ಯಾಯ ಪಲಿಮಾರು ಶ್ರೀಕೃಷ್ಣ ಮಶ್ರದ ಆಶ್ರಯದಲ್ಲಿ ಉಡುಪಿ ತುಳು ಕೂಟದ ವತಿಯಿಂದ ಶನಿವಾರ ರಾಜಾಂಗಣದಲ್ಲಿ ಆಯೋಜಿಸಲಾದ ಮಲ್ಪೆ ರಾಮದಾಸ ಸಾಮಗ ನೆನಪಿನ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅವರಿಗೆ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.
ಅದಮಾರು ಕಿರಿಯ ಯತಿ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು. ಅಧ್ಯಕ್ಷತೆಯನ್ನು ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಐರೋಡಿ ರಾಜಶೇಖರ ಹೆಬ್ಬಾರ್ ಹಾಗೂ ಉದ್ಯಮಿ ವಿಶ್ವನಾಥ ಶೆಣೈ ಭಾಗವಹಿಸಿದ್ದರು.
ತುಳುಕೂಟ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು ಸ್ವಾಗತಿಸಿ ದರು. ಕೋಶಾಧಿಕಾರಿ ಚೈತನ್ಯ ಎಂ.ಜಿ. ವಂದಿಸಿದರು. ಪ್ರಕಾಶ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಾಮಗ ಪ್ರಶಸ್ತಿ ಸಮಿತಿ ಸಂಚಾಲಕ ಎಸ್.ವಿ. ಭಟ್ ಉಪಸ್ಥಿತರಿದ್ದರು. ಬಳಿಕ ಗಣೇಶ ಕೊಲೆಕಾಡಿ ವಿರಚಿತ ಗೇಲ್ದಬೀರೆ ವಾಲಿ ತುಳು ಯಕ್ಷಗಾನ ನಡೆಯಿತು.





