Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ಯಾರಾ ಆರ್ಚರಿ: ಭಾರತಕ್ಕೆ ಚಾರಿತ್ರಿಕ...

ಪ್ಯಾರಾ ಆರ್ಚರಿ: ಭಾರತಕ್ಕೆ ಚಾರಿತ್ರಿಕ ಸ್ವರ್ಣ

ವಾರ್ತಾಭಾರತಿವಾರ್ತಾಭಾರತಿ9 July 2018 11:57 PM IST
share
ಪ್ಯಾರಾ ಆರ್ಚರಿ: ಭಾರತಕ್ಕೆ ಚಾರಿತ್ರಿಕ ಸ್ವರ್ಣ

ಕೋಲ್ಕತಾ, ಜು.9: ಝೆಕ್ ಗಣರಾಜ್ಯದಲ್ಲಿ ನಡೆದ ಯುರೋಪಿ ಯನ್ ಪ್ಯಾರಾ ಆರ್ಚರಿ (ದೈಹಿಕ ಅಶಕ್ತರ ಬಿಲ್ಲುಸ್ಪರ್ಧೆ)ಕಪ್ ಎರಡನೇ ಹಂತದ ಸ್ಪರ್ಧೆಯಲ್ಲಿ ಭಾರತದ ಸ್ಪರ್ಧಿಗಳು ಪ್ರಥಮ ಸ್ಥಾನ ಗಳಿಸುವುದರೊಂದಿಗೆ ದೇಶಕ್ಕೆ ಚಾರಿತ್ರಿಕ ಚಿನ್ನದ ಪದಕ ತಂದು ಕೊಟ್ಟಿದ್ದಾರೆ. ಭಾರತದ ಪ್ಯಾರಾ ಆರ್ಚರಿ ಸ್ಪರ್ಧಿ ಗಳಾದ ರಾಕೇಶ್ ಕುಮಾರ್, ಶ್ಯಾಮ್‌ಸುಂದರ್ ಸ್ವಾಮಿ ಹಾಗೂ ತಾರೀಫ್ ಅವರಿದ್ದ ತಂಡವು ಲೀಗ್‌ನಲ್ಲಿ ಎರಡನೇ ತಂಡವಾಗಿ ಮುಂದಿನ ಸುತ್ತಿಗೆ ಅರ್ಹತೆ ಗಳಿಸಿತ್ತು. ಫೈನಲ್ ಸ್ಪರ್ಧೆಯಲ್ಲಿ ರೊಮಾನಿಯಾ ವಿರುದ್ಧ 224-207 ಅಂತರದಲ್ಲಿ ಜಯ ಸಾಧಿಸಿದ ತಂಡ ಜಕಾರ್ತಾದಲ್ಲಿ ಮುಂದಿನ ಅಕ್ಟೋಬರ್‌ನಲ್ಲಿ ನಡೆಯಲಿರುವ ಪ್ಯಾರಾ ಏಶಿಯನ್ ಗೇಮ್ಸ್ ಸ್ಪರ್ಧೆಗೆ ಸಜ್ಜುಗೊಂಡಿದೆ. ಪ್ರಥಮ ಸುತ್ತಿನ ಬಳಿಕ ಭಾರತೀಯ ತಂಡವು 54-55ರಲ್ಲಿ ಹಿನ್ನಡೆ ಅನುಭವಿಸಿತ್ತು. ಆದರೆ ಎರಡನೇ ಸುತ್ತಿನಲ್ಲಿ ಉತ್ತಮ ಪ್ರದರ್ಶನ ತೋರಿ ಐದು ಅಂಕಗಳ ಮುನ್ನಡೆ ಹಾಗೂ ತೃತೀಯ ಸುತ್ತಿನಲ್ಲಿ ಆರು ಅಂಕದ ಮುನ್ನಡೆ ಸಾಧಿಸಿತು. ಇದೇ ಆಟ ಮುಂದುವರಿಸಿದ ಭಾರತೀಯರು ಅಂತಿಮವಾಗಿ ಗೆಲುವಿನ ನಗೆ ಬೀರಿದರು. ಜಮ್ಮು ನಿವಾಸಿಯಾಗಿರುವ ರಾಕೇಶ್ ಅಪಘಾತಕ್ಕೀಡಾದ ಬಳಿಕ ಸೊಂಟದ ಕೆಳಭಾಗ ನಿಷ್ಕ್ರಿಯಗೊಂಡಿದೆ. ಪಾರ್ಶ್ವವಾಯುಗೆ ಒಳಗಾಗಿ ಒಂದು ಕೈ ನಿಷ್ಕ್ರಿಯಗೊಂಡಿರುವ ಶ್ಯಾಮ್‌ಸುಂದರ್ ಸ್ವಾಮಿ ಹಲ್ಲಿನ ಮೂಲಕ ಬಿಲ್ಲಿನ ಹುರಿಯನ್ನು ಎಳೆಯುತ್ತಾರೆ. ಒಂದು ಕಾಲು ಊನಗೊಂಡಿರುವ ಹರ್ಯಾಣದ ನಿವಾಸಿ ತಾರೀಫ್ ಬಿಲ್ಲಿಗೆ ಬಾಣ ಹೂಡಲು ಬಳಸುವ ತಂತ್ರ ವಿಶಿಷ್ಟವಾಗಿದೆ. ಪ್ರಥಮ ಸುತ್ತಿನಲ್ಲಿ ಬೈ ಪಡೆದಿದ್ದ ಭಾರತೀಯ ತಂಡ ದ್ವಿತೀಯ ಸುತ್ತಿನಲ್ಲಿ ಪೋಲಂಡ್ ಎದುರು 222-214 ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು.ಫ್ರಾನ್ಸ್ ಎದುರು ಸೆಮಿಫೈನಲ್‌ನಲ್ಲಿ ನಿಗದಿತ ಅವಧಿಯಲ್ಲಿ ಉಭಯ ತಂಡಗಳೂ 221ರಲ್ಲಿ ಸಮಬಲ ಸಾಧಿಸಿದ ಬಳಿಕ ಟೈಬ್ರೇಕರ್‌ನಲ್ಲಿ ಭಾರತೀಯರು 29-28ರ ರೋಚಕ ಜಯ ಸಾಧಿಸಿದ್ದರು. ಈ ಟೂರ್ನಿಗೆ ಭಾರತವು ಎಂಟು ಪುರುಷರು ಹಾಗೂ ಇಬ್ಬರು ಮಹಿಳೆಯರ ಸಹಿತ 10 ಸದಸ್ಯರ ತಂಡವನ್ನು ಕಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X