Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯೂ ಶಮ್ಸ್ ಶಾಲೆಯಲ್ಲಿ ಸ್ಟೂಡೆಂಟ್ಸ್...

ನ್ಯೂ ಶಮ್ಸ್ ಶಾಲೆಯಲ್ಲಿ ಸ್ಟೂಡೆಂಟ್ಸ್ ಕೌನ್ಸಿಲ್ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 July 2018 7:00 PM IST
share
ನ್ಯೂ ಶಮ್ಸ್ ಶಾಲೆಯಲ್ಲಿ ಸ್ಟೂಡೆಂಟ್ಸ್ ಕೌನ್ಸಿಲ್ ಪದಗ್ರಹಣ ಸಮಾರಂಭ

ಭಟ್ಕಳ, ಜು. 10: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸ್ಟೂಡೆಂಟ್ಸ್ ಕೌನ್ಸಿಲ್ ಪ್ರೇರಕವಾಗುತ್ತದೆ ಎಂದು ಭಟ್ಕಳ ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ಶ್ರೀಕಾಂತ್ ನಾಯಕ ಅಭಿಪ್ರಾಯಪಟ್ಟರು.

ಅವರು ಮಂಗಳವಾರ ಹೆಬಳೆ ಪಂಚಾಯತ್ ವ್ಯಾಪ್ತಿಯ ತರಬಿಯತ್ ಎಜುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಸ್ಕೂಲ್ ಸಭಾಭವನದಲ್ಲಿ ಜರಗಿದ ಸ್ಟೂಡೆಂಟ್ಸ್ ಕೌನ್ಸಿಲ್ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರಜಾಪ್ರುಭತ್ವ ರೀತಿಯಲ್ಲಿ ಆಯ್ಕೆಗೊಂಡ ಜನಪ್ರತಿನಿಧಿಗಳು ದೇಶ ಹಾಗೂ ರಾಜ್ಯವನ್ನು ಪ್ರತಿನಿಧಿಸಿದರೆ ವಿದ್ಯಾರ್ಥಿ ನಾಯಕನು ತನ್ನ ಶಾಲೆಯನ್ನು ಪ್ರತಿನಿಧಿಸುತ್ತಾನೆ. ಈ ಮೂಲಕ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಲು ಶಾಲೆಗಳು ಪ್ರೇರಣೆ ನೀಡುತ್ತವೆ ಎಂದರು.

ಅಂಜುಮನ್ ಪಿ.ಯು ಬೋರ್ಡ್ ಕಾರ್ಯದರ್ಶಿ ಮೊಹಸಿನ್ ಶಾಬಂದ್ರಿ ಮಾತನಾಡಿ, ಇಂದು ಶಿಕ್ಷಣ ಕ್ಷೇತ್ರವು ಅಗಾಧವಾಗಿ ಪರಿವರ್ತನೆ ಹೊಂದಿದ್ದು ಹಿಂದಿನ ವರ್ಷ ಕಲಿತ ವಿಷಯ ಹಳತಾಗಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಮುಂದಿನ 5 ವರ್ಷಗಳ ನಂತರ ಶಿಕ್ಷಣ ಕ್ಷೇತ್ರ ಹೇಗಿರುತ್ತದೆ ಏನೆಲ್ಲ ಬದಲಾವಣೆಗಳಾಗುತ್ತವೆ ಎಂಬ ಕಲ್ಪನೆಯೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು. ತರಗತಿಯಲ್ಲಿ ರ್ಯಾಂಕ್ ಪಡೆದವರಿಗಿಂತಲೂ ಕೇವಲ 40%-50% ಅಂಕ ಗಳಿಸಿದವರು ಭವಿಷ್ಯದಲ್ಲಿ ಮುಂದೆ ಬಂದಿರುವುದನ್ನು ನಾವು ಕಂಡಿದ್ದೇವೆ. ಕೇವಲ ರ್ಯಾಂಕ್ ಗಳಿಕೆಯೊಂದೇ ಶಿಕ್ಷಣದ ಮಾನದಂಡವಲ್ಲ ಬದಲಾಗಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣೆಗೆ ಆಗಬೇಕು ಎಂದರು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಎಲ್ಲ ರೀತಿಯ ಕೆಲಸವನ್ನು ಮಾಡಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ನಿಕೃಷ್ಟ ಎಂದು ಭಾವಿಸದೆ ತನ್ನ ಕೆಲಸದಲ್ಲಿ ನಿಷ್ಟೆಯನ್ನು ಪ್ರದರ್ಶಿಸುವುದರ ಮೂಲಕ ಮುನ್ನೆಡೆ ಸಾಧಿಸಬೇಕೆಂದು ಅವರು ಕರೆ ನೀಡಿದರು.

ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮುಷ್ತಾಖ್ ಆಹ್ಮದ್ ಭಾವಿಕಟ್ಟೆ ಮಾತನಾಡಿ, ಜ್ಞಾನ, ಕೌಶಲ್ಯ ಮತ್ತು ಮನೋಭಾವ ಈ ಮೂರನ್ನು ಯಾರು ಬೆಳೆಸಿಕೊಳ್ಳುತ್ತಾರೋ ಅವರು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ನಾಯಕನಾದವನಲ್ಲಿ ಉತ್ತಮ ಜ್ಞಾನ ಕೌಶಲ ಹಾಗೂ ಅವನ ಉತ್ತಮ ವರ್ತನೆಯನ್ನು ಮೈಗೂಡಿಸಿಕೊಳ್ಳಬೇಕಾಗುತ್ತದೆ ಎಂದರು.

ಶಮ್ಸ್ ಸ್ಕೂಲ್ ಬೋರ್ಡ್ ಚೇರ್ಮನ್ ಕಾದಿರ್ ಮೀರಾ ಪಟೇಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯೂಶಮ್ಸ್ ಸ್ಕೂಲ್ ಪ್ರಾಂಶುಪಾಲೆ ಫಹಮಿದಾ ಡಾಟಾ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಮುಹಮ್ಮದ್ ರಝಾ ಮಾನ್ವಿ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ ವಂದಿಸಿದರು. ಶಿಕ್ಷಕರಾದ ಶಾಝಿರ್ ಹುಸೈನ್ ಹಾಗೂ ಅಬ್ದುಲ್ಲಾ ಖಲಿಫಾ ನದ್ವಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X