Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಸ್ಮುಖ್ ಅಧಿಯಾ, ಮುಖ್ಯ ಆರ್ಥಿಕ...

ಹಸ್ಮುಖ್ ಅಧಿಯಾ, ಮುಖ್ಯ ಆರ್ಥಿಕ ಸಲಹೆಗಾರರಿಗೆ ನೋಟಿಸ್

ಬ್ಯಾಂಕ್‌ಗಳಲ್ಲಿ ಹೆಚ್ಚುತ್ತಿರುವ ಮರುಪಾವತಿಯಾಗದ ಸಾಲ

ವಾರ್ತಾಭಾರತಿವಾರ್ತಾಭಾರತಿ10 July 2018 7:26 PM IST
share
ಹಸ್ಮುಖ್ ಅಧಿಯಾ, ಮುಖ್ಯ ಆರ್ಥಿಕ ಸಲಹೆಗಾರರಿಗೆ ನೋಟಿಸ್

ಹೊಸದಿಲ್ಲಿ, ಜು.10: ಭಾರತೀಯ ಬ್ಯಾಂಕ್‌ಗಳಲ್ಲಿ ಹೆಚ್ಚುತ್ತಿರುವ ಮರುಪಾವತಿಯಾಗದ ಸಾಲಗಳ ವಿಷಯಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ನೇತೃತ್ವದ ಅಂದಾಜು ಸಮಿತಿಯು ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣ್ಯನ್, ವಿತ್ತ ಕಾರ್ಯದರ್ಶಿ ಹಸ್ಮುಖ್ ಅಧಿಯಾ, ಆರ್‌ಬಿಐ ಸಹಾಯಕ ಗವರ್ನರ್ ಮಹೇಶ್ ಕುಮಾರ್ ಜೈನ್ ಹಾಗೂ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಶ್ ಚಂದ್ರ ಗರ್ಗ್‌ಗೆ ನೋಟಿಸ್ ಜಾರಿ ಮಾಡಿದೆ.

ಇದಕ್ಕೂ ಮುನ್ನ ಜೋಶಿ ಸಾರ್ವಜನಿಕ ಲೆಕ್ಕಾಚಾರ ಸಮಿತಿಯ ನೇತೃತ್ವ ವಹಿಸಿದ್ದು, ಆಮೂಲಕ 2ಜಿ ಹಗರಣದ ಕುರಿತು ವರದಿಯನ್ನು ಸಿದ್ಧಪಡಿಸಿದ್ದರು. ಅಂದಾಜು ಸಮಿತಿಯು, ತೆರಿಗೆ ಹಣವನ್ನು ಸರಕಾರವು ಸಮರ್ಥವಾಗಿ ಬಳಸುತ್ತಿದೆಯೇ ಎಂಬುದರ ಮೇಲೆ ನಿಗಾಯಿಡುತ್ತದೆ. ಈ ಹಿನ್ನೆಲೆಯಲ್ಲಿ ದೇಶದ ವಿತ್ತೀಯ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿರುವ ಕೆಟ್ಟಸಾಲಗಳ ಪರಿಶೀಲನೆ ನಡೆಸುವಲ್ಲಿ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಾರೆ ಎಂದು ಹೇಳಲಾಗುತ್ತಿದೆ. ಸಮಿತಿ ಜಾರಿ ಮಾಡಿರುವ ನೋಟಿಸ್‌ನಿಂದ ವಿತ್ತ ಸಚಿವಾಲಯದಲ್ಲಿ ಚಡಪಡಿಕೆ ಆರಂಭವಾಗಿದೆ.

ಸದ್ಯ ಪಿಯೂಶ್ ಗೋಯಲ್ ವಿತ್ತ ಸಚಿವರಾಗಿದ್ದು, ಅವರಿಗೂ ಹಿಂದಿನ ವಿತ್ತ ಸಚಿವ ಅರುಣ್ ಜೇಟ್ಲಿ ಈಗಲೂ ವಿವಿಧ ಯೋಜನೆಗಳ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ನಿಲುವಿಗೆ ಬದ್ಧವಾಗಿದ್ದಾರೆ. ಸದ್ಯ ಕೇಂದ್ರ ಸರಕಾರವು ಬ್ಯಾಂಕ್‌ಗಳಲ್ಲಿ ಹೆಚ್ಚುತ್ತಿರುವ ಎನ್‌ಪಿಎಗಳಿಂದಾಗಿ ಚಿಂತೆಗೀಡಾಗಿರುವ ಮಧ್ಯೆಯೇ ಜೋಶಿ ನೇತೃತ್ವದ ಸಮಿತಿ ಸದ್ಯ 10 ಲಕ್ಷ ಕೋಟಿಗೂ ಅಧಿಕವಿರುವ ಮರುಪಾವತಿಯಾಗದ ಸಾಲಗಳನ್ನು ಪರಿಶೀಲಿಸಲು ಮುಂದಾಗಿದೆ. ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಕೇಂದ್ರ ಸರಕಾರ ತೋರಿದ ವಿಳಂಬ ನೀತಿಯಿಂದಾಗಿ ಈಗ ಎನ್‌ಪಿಎ ಸಮಸ್ಯೆಯನ್ನು ನಿಯಂತ್ರಿಸುವುದು ಬಹಳ ಕಷ್ಟಕರವಾಗಿ ಪರಿಣಮಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X