Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವೇನು ದೇವರೇ?: ಪೆಟ್ರೋಲಿಯಂ...

ನೀವೇನು ದೇವರೇ?: ಪೆಟ್ರೋಲಿಯಂ ಸಚಿವಾಯಕ್ಕೆ ಸುಪ್ರೀಂ ತರಾಟೆ

ವಾರ್ತಾಭಾರತಿವಾರ್ತಾಭಾರತಿ10 July 2018 7:32 PM IST
share
ನೀವೇನು ದೇವರೇ?: ಪೆಟ್ರೋಲಿಯಂ ಸಚಿವಾಯಕ್ಕೆ ಸುಪ್ರೀಂ ತರಾಟೆ

ಹೊಸದಿಲ್ಲಿ, ಜು.10: ಸೋಮವಾರದಂದು ಪೆಟ್ರೋಲಿಯಂ ಸಚಿವಾಲಯ (ಎಮ್‌ಒಪಿಎನ್‌ಜಿ) ವನ್ನು ತರಾಟೆಗೆ ತೆಗೆದುಕೊಂಡ ಸರ್ವೋಚ್ಚ ನ್ಯಾಯಾಲಯ, ನೀವೇನು ದೇವರೇ ಅಥವಾ ಸರಕಾರಕ್ಕೂ ಮಿಗಿಲೇ?, ನ್ಯಾಯಾಧೀಶರು ನಿರುದ್ಯೋಗಿಯಾಗಿದ್ದು ನಿಮ್ಮ ದಯೆಯಲ್ಲಿದ್ದಾರೆ ಎಂದು ಭಾವಿಸಿದ್ದೀರಾ? ಎಂದು ಕೆಂಡಕಾರಿದೆ.

ಕೈಗಾರಿಕಾ ಇಂಧನವಾಗಿ ಬಳಸಲ್ಪಡುವ ಪೆಟ್ ಕೋಕ್‌ನ ಆಮದಿನ ಮೇಲೆ ನಿಷೇಧ ಹೇರಿರುವ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ರವಿವಾರವಷ್ಟೇ ತಿಳಿಸಿದೆ ಎಂಬ ಮಾಹಿತಿ ಪಡೆದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಮದನ್ ಬಿ. ಲೋಕುರ್ ಹಾಗೂ ದೀಪಕ್ ಗುಪ್ತಾ ನೇತೃತ್ವದ ಪೀಠವು ಈ ರೀತಿಯಾಗಿ ತನ್ನ ಅಸಮಾಧಾನವನ್ನು ಹೊರಹಾಕಿದೆ. ದಿಲ್ಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶ (ಎನ್‌ಸಿಆರ್)ನಲ್ಲಿನ ವಾಯು ಮಾಲಿನ್ಯಕ್ಕೆ ಸಂಬಂಧಿಸಿದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಪೀಠವು, ಈ ನಿರ್ಲಕ್ಷ ಧೋರಣೆಗಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ 25,000 ರೂ. ದಂಡ ವಿಧಿಸಿದೆ.

ನಗರದ ಹಲವೆಡೆ ಉಂಟಾಗುವ ರಸ್ತೆಗಳಲ್ಲಿ ವಾಹನದಟ್ಟಣೆಯನ್ನು ಕಡಿಮೆ ಮಾಡುವಂತೆ ಸೂಚಿಸಿ ನ್ಯಾಯಾಲಯ ನೀಡಿರುವ ಆದೇಶದ ಬಗ್ಗೆ ಯಾವುದೇ ವರದಿಯನ್ನು ಒಪ್ಪಿಸದ ದಿಲ್ಲಿ ಸರಕಾರ ಮೇಲೆಯೂ ನ್ಯಾಯಪೀಠವು ಒಂದು ಲಕ್ಷ ರೂ. ದಂಡ ವಿಧಿಸಿದೆ. ಎಮ್‌ಒಇಎಫ್‌ಆ್ಯಂಡ್‌ಸಿಸಿ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎ.ಎನ್.ಎಸ್ ನದ್ಕರ್ನಿ, ಪೆಟ್ರೋಲಿಯಂ ಸಚಿವಾಲಯವು ರವಿವಾರವಷ್ಟೇ ನಮಗೆ ನಿಷೇಧದ ಬಗ್ಗೆ ತಿಳಿಸಿದ್ದಾರೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಸಚಿವಾಲಯದ ಮೇಲೆ ಹರಿಹಾಯ್ದ ನ್ಯಾಯಪೀಠವು, “ಪೆಟ್ರೋಲಿಯಂ ಸಚಿವಾಲಯವೇನು ದೇವರೇ?” ಅವರಿಗೆ ಬೇಕಾದಾಗ ಅವರು ಪ್ರತಿಕ್ರಿಯೆ ನೀಡುತ್ತಾರೆಯೇ?, ಅವರ ಹೆಸರನ್ನು ಪೆಟ್ರೋಲಿಯಂ ಸಚಿವಾಲಯದಿಂದ ದೇವರು ಎಂದು ಬದಲಿಸುವಂತೆ ತಿಳಿಸಿ ಎಂದು ಖಾರವಾಗಿ ನುಡಿದಿದೆ. ಅಲ್ಲಿಗೇ ನಿಲ್ಲಿಸಿದ ಪೀಠವು, “ಪೆಟ್ರೋಲಿಯಂ ಸಚಿವಾಲಯ ಸರಕಾರಕ್ಕೂ ಮಿಗಿಲೇ?, ಅಷ್ಟಕ್ಕೂ ಆ ಸಚಿವಾಲಯದ ಸ್ಥಾನ ಯಾವುದು?, ಅವರು ಯಾವುದೇ ಆದೇಶವನ್ನು ಯಾಕೆ ಪಾಲಿಸುವುದಿಲ್ಲ?” ಎಂದು ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X