Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅರಣ್ಯ ಪ್ರದೇಶದಲ್ಲಿನ ವಿಶ್ರಾಂತಿ...

ಅರಣ್ಯ ಪ್ರದೇಶದಲ್ಲಿನ ವಿಶ್ರಾಂತಿ ಗೃಹಗಳಿಗೆ ಸಾರ್ವಜನಿಕರ ಪ್ರವೇಶ ನಿಷಿದ್ಧ

ವಾರ್ತಾಭಾರತಿವಾರ್ತಾಭಾರತಿ10 July 2018 8:48 PM IST
share

ಬೆಂಗಳೂರು, ಜು.10: ಅರಣ್ಯ ಪ್ರದೇಶಗಳಲ್ಲಿರುವ ವಿಶ್ರಾಂತಿ ಗೃಹಗಳು, ತಪಾಸಣೆ ಬಂಗಲೆಗಳಲ್ಲಿ ಪ್ರವಾಸಿಗರಿಗೆ ಉಳಿದುಕೊಳ್ಳಲು ಅಲಭ್ಯವಾಗಲಿವೆ. ಅರಣ್ಯ ಪ್ರದೇಶಗಳಲ್ಲಿರುವ ಇಂತಹ ಕಟ್ಟಡಗಳನ್ನು ದುರುಪಯೋಗ ಪಡಿಸಿಕೊಳ್ಳದಂತೆ ಸುಪ್ರೀಂಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇಂತಹ ಅನೇಕ ಜಾಗಗಳನ್ನು ಗುರುತಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಕೆಲವು ವಿಶ್ರಾಂತಿ ಗೃಹಗಳನ್ನು ಜಂಗಲ್ ಲಾಡ್ಜರ್ಸ್ ಅಂಡ್ ರೆಸಾರ್ಟ್ಸ್ ಲಿಮಿಟೆಡ್‌ಗೆ ಪ್ರವಾಸೋದ್ಯಮ ಉದ್ದೇಶಗಳಿಗೆ ನೀಡಲಾಗಿದೆ. ಅರಣ್ಯದಲ್ಲಿರುವ ಇಂತಹ ವಸತಿಗಳನ್ನು ಪ್ರವಾಸೋದ್ಯಮ ಉದ್ದೇಶಗಳಿಗೆ ನೀಡುವಂತಿಲ್ಲ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಹಿಂತೆಗೆದುಕೊಳ್ಳಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅರಣ್ಯ ವಸತಿ ಗೃಹಗಳನ್ನು ಖಾಸಗಿ ಅಥವಾ ವಾಣಿಜ್ಯ ಸಂಸ್ಥೆಗಳಿಗೆ ಪ್ರವಾಸೋದ್ಯಮಕ್ಕೆ ವರ್ಗಾಯಿಸುವಂತಿಲ್ಲ ಎಂದು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ಅಭಿಪ್ರಾಯಿಸಿದ್ದಾರೆ. ಆದರೆ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಭಗವತಿ ಪ್ರಕೃತಿ ತಾಣ ಮತ್ತು ಸೋಮೇಶ್ವರ ವನ್ಯಜೀವಿ ಅಭಯಾರಣ್ಯದ ಸೀತನಾಡಿಗಳನ್ನು ಜೆಎಲ್ಆರ್ ಗ್ರೂಪ್‌ಗಳಿಗೆ ಹಸ್ತಾಂತರ ಮಾಡಲಾಗಿದೆ ಎಂದು ಕಾರ್ಯಕರ್ತರು ಆರೋಪಿದ್ದಾರೆ.

ಅಲ್ಲದೆ, ಭೀಮಗಡದ ವನ್ಯಜೀವಿ ಅಭಯಾರಣ್ಯದ ಹೆಮ್ಮಗಾಡ ಪ್ರಕೃತಿ ತಾಣ, ದಾಂಡೇಲಿಯ ಕ್ಯಿಸಲ್ ರಾಕ್ ಸಾಹಸ ಶಿಬಿರ ತಾಣ, ಚಿತ್ರದುರ್ಗದಲ್ಲಿರುವ ಜೊಗ್ಗಿಮಟ್ಟಿ ಎನ್‌ಸಿ ಮತ್ತು ಚಿಕ್ಕಮಗಳೂರಿನ ಮಲಯ ಮಾರುತ ಐಬಿಗಳನ್ನು ಪ್ರವಾಸೋದ್ಯಮ ಉದ್ದೇಶಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಪ್ರಕಾರ ಅರಣ್ಯಗಳಲ್ಲಿರುವ ವಿಶ್ರಾಂತಿ ಗೃಹಗಳು ಮತ್ತು ಬಂಗಲೆಗಳು ಸಂರಕ್ಷಣೆಗಾಗಿ ಮೀಸಲಿಡಬೇಕಾಗಿದ್ದು, ಪ್ರವಾಸೋದ್ಯಮಕ್ಕಾಗಿ ಇರುವುದಲ್ಲ. ಅವುಗಳನ್ನು ಖಾಸಗಿಯವರಿಂದ ಮತ್ತೆ ರಾಜ್ಯ ಸರಕಾರಕ್ಕೆ ಹಿಂಪಡೆಯಬೇಕಾಗಿದೆ ಎಂದು ವನ್ಯಜೀವಿ ಕಾರ್ಯಕರ್ತರೊಬ್ಬರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X