ನಾಗರಿಕ ಸೇವಾ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜು.10: ಹುಬ್ಬಳ್ಳಿಯಲ್ಲಿರುವ ಸಮುತ್ಕರ್ಷ ಟ್ರಸ್ಟ್ ಸಂಸ್ಥೆ ವತಿಯಿಂದ ಮುಂದಿನ ಆಗಸ್ಟ್‌ನಿಂದ ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಟ್ರಸ್ಟ್‌ನ ಕಾಯದರ್ಶಿ ಜಿತೇಂದ್ರ ನಾಯಕ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಲ್ಲಿಯ ಸಂಕಲ್ಪ ಎಂಬ ಸಂಸ್ಥೆಯೊಂದಿಗೆ ತರಬೇತಿ ತರಗತಿಗಳನ್ನು ನಡೆಸಲಾಗುತ್ತಿದೆ. ಹೀಗಾಗಿ, ಮುಂದಿನ ವರ್ಷದ ನಾಗರಿಕ ಸೇವಾ ಪರೀಕ್ಷೆಗಳಿಗೆ ಹಿರಿಯ ಅಧಿಕಾರಿಗಳ ಹಾಗೂ ಅನುಭವಿ ಉಪನ್ಯಾಸಕರಿಂದ ತರಗತಿಗಳು ಆರಂಭಿಸಲಾಗುತ್ತಿದೆ ಎಂದು ಹೇಳಿದರು.
ಆಸಕ್ತರು ಜು.14 ರೊಳಗೆ ವೆಬ್‌ಸೈಟ್‌ನಲ್ಲಿ ನೋಂದಣಿ ಅರ್ಜಿ ಭರ್ತಿ ಮಾಡಿ ಜು.22 ರಂದು ನಡೆಯಲಿರುವ ಪ್ರವೇಶ ಪರೀಕ್ಷೆಗೆ ಹಾಜರಾಗಬೇಕು. ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಗಸ್ಟ್‌ನಿಂದ ತರಗತಿಗಳು ನಡೆಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 97391 13612 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.





