Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವ ಜನತೆಗೆ ಸೂಕ್ತ ಮಾರ್ಗದರ್ಶನ...

ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಸಿಗಬೇಕು: ದಿನಕರ ಬಾಬು

ಮಾದಕ ವ್ಯಸನ ಮತ್ತು ಕಳ್ಳಸಾಗಣೆ ನಿಷೇಧಿತ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ10 July 2018 10:13 PM IST
share
ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಸಿಗಬೇಕು: ದಿನಕರ ಬಾಬು

ಉಡುಪಿ, ಜು.10: ಇಂದಿನ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿದ್ದು, ಇದನ್ನು ತಪ್ಪಿಸುವ ಸಲುವಾಗಿ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಉತ್ತಮ ನೈತಿಕ ಶಿಕ್ಷಣ ಹಾಗೂ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆಯಿದೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಮಂಗಳವಾರ ಸಂತೆಕಟ್ಟೆಯ ಧನ್ವಂತರಿ ಸ್ಕೂಲ್ ಮತ್ತು ಕಾಲೇಜು ಆಪ್ ನರ್ಸಿಂಗ್‌ನಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಉಡುಪಿ ಧನ್ವಂತರಿ ಸ್ಕೂಲ್ ಮತ್ತು ಕಾಲೇಜು ಆಫ್ ನರ್ಸಿಂಗ್ ಸಂತೆಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳಸಾಗಣೆ ನಿಷೇಧಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮಾಜದ ಸ್ವಾಸ್ಥ್ಯ ಕೆಡಿಸುವ ಮಾದಕ ವಸ್ತುಗಳ ಬಳಕೆ ವಿರುದ್ಧ ಪ್ರತಿ ಯೊಬ್ಬರೂ ಹೋರಾಡಬೇಕಿದೆ. ಯುವಜನತೆ ಈ ವ್ಯಸನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳು ಪರೀಕ್ಷೆಯಲ್ಲಿ ಗಳಿಸುವ ಅಂಕಗಳಿಗಿಂತ ಹೆಚ್ಚಾಗಿ ಉತ್ತಮ ನೈತಿಕ ವೌಲ್ಯಗಳನ್ನು ಅವರಿಗೆ ಕಲಿಸಬೇಕಿದೆ. ಅಲ್ಲದೆ ಶಾಲೆಗಳಲ್ಲಿ ಶಿಕ್ಷಕರೂ ಸಹ ಸರಿಯಾದ ಮಾರ್ಗದರ್ಶನ ನೀಡಬೇಕು. ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತಂತೆ ಯುವಜನತೆ ಯಲ್ಲಿ ಅರಿವು ಮೂಡಿಸಬೇಕು ಎಂದು ದಿನಕರಬಾಬು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಮಾತನಾಡಿ, ಮಾದಕ ವ್ಯಸನ ಹೆಚ್ಚಿನ ಸಂಖ್ಯೆಯಲ್ಲಿ ಅತೀ ಶ್ರೀಮಂತರು ಮತ್ತು ಅತೀ ಬಡವರಲ್ಲಿ ಕಂಡು ಬರುತ್ತಿದೆ. ಅತೀ ಶ್ರೀಮಂತಿಕೆ ಮತ್ತು ಶಿಕ್ಷಣದ ಕೊರತೆ ಇದಕ್ಕೆ ಕಾರಣ. ಪ್ರಾರಂಭದಲ್ಲಿ ಆಕರ್ಷಣೀಯವಾಗಿ ಕಂಡುಬಂದ ಮಾದಕ ವಸ್ತು ಸೇವನೆ ಕ್ರಮೇಣ ವ್ಯಸನ ವಾಗುತ್ತದೆ. ಭಾರತದಲ್ಲಿ ಔಷದೀಯ ಬಳಕೆಗೆ ಮಾತ್ರ ಅನುಮತಿ ಇರುವ ಮಾದಕ ವಸ್ತುಗಳ ಬಳಕೆಗೆ ಇತರೇ ರೂಪದಲ್ಲಿ ಸಂಪೂರ್ಣ ನಿಷೇಧವಿದೆ ಎಂದರು.

 ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ  ದಂತಹ ದೇಶಗಳಲ್ಲಿ ಕಾನೂನಿನ ನಿಯಂತ್ರಣದಲ್ಲಿಲ್ಲದ ಮಾದಕ ವಸ್ತುಗಳ ಉತ್ಪಾದನೆ, ಕಳ್ಳಸಾಗಣೆ ಮೂಲಕ ಭಾರತಕ್ಕೆ ಆಗಮಿಸಿ ಇಲ್ಲಿನ ಯುವ ಜನತೆಯನ್ನು ನಾಶ ಮಾಡುತ್ತಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಸ್ವಯಂ ನಿಯಂತ್ರಣದಿಂದ ಮಾತ್ರ ಈ ವ್ಯಸನದಿಂದ ಮುಕ್ತವಾಗಬಹುದು. ಮಾದಕ ವ್ಯಸನ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾತ್ರವಲ್ಲದೇ, ಇತರೆ ಎಲ್ಲಾ ಇಲಾಖೆಗಳು, ಇಡೀ ಸಮಾಜ, ಪೋಷಕರು, ಶಿಕ್ಷಕರು ಹಾಗೂ ಮಾಧ್ಯಮಗಳ ಪಾತ್ರ ಬಹು ಮುಖ್ಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರ ಚಿಂಬಾಲ್ಕರ್, ವಿಶ್ವದಲ್ಲಿ 5.3 ಬಿಲಿಯನ್ ಮಾದಕ ವ್ಯಸನಿ ಗಳಿದ್ದು, ಭಾರತದಲ್ಲಿ ಈ ಸಂಖ್ಯೆ 7.3 ಕೋಟಿ ಆಗಿದೆ. ಪ್ರತಿದಿನ 10 ಮಂದಿ ಈ ವ್ಯಸನದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನಿಗಳಲ್ಲಿ ಶೇ.89 ವಿದ್ಯಾವಂತರಿದ್ದು, ಇವರಲ್ಲಿ ಶೇ.83 ಉದ್ಯೋಗಿಗಳಾಗಿದ್ದಾರೆ.  ಇಂಥವರಲ್ಲಿ ಪುರುಷರ ಪ್ರಮಾಣ ಶೇ.99. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಮಾನಸಿಕ ತಜ್ಞ ಡಾ. ಮಾನಸ್ ಮಾತನಾಡಿ, 2016ರ ಸಮೀಕ್ಷೆಯಂತೆ ವಿಶ್ವದಲ್ಲಿ 275 ಮಿಲಿಯನ್ ಮಾದಕ ವ್ಯಸನಿಗಳಿದ್ದು, ಇದು ವಿಶ್ವದ ಒಟ್ಟು ಜನಸಂಖ್ಯೆಯ ಶೇ. 5.6ರಷ್ಟು. ಇವರಲ್ಲಿ 31 ಮಿಲಿಯನ್ ಮಂದಿ ಮಾದಕ ವ್ಯಸನ ಚಿಕಿತ್ಸೆ ಪಡೆಯುವ ಹಂತದಲ್ಲಿದ್ದಾರೆ. ಮಾದಕ ವ್ಯಸನದಿಂದ ವ್ಯಕ್ತಿಗಳಲ್ಲಿ ಖಿನ್ನತೆ ಮತ್ತು ಆತ್ಮಹತ್ಯೆ ಸಂಭವಿಸುತ್ತಿದೆ. ಇಂತಹ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಮಾರ್ಗದರ್ಶನ ನೀಡಿದಲ್ಲಿ ವ್ಯಸನದಿಂದ ಹೊರ ರಲು ಸಾದ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಉಡುಪಿ ಧನ್ವಂತರಿ ಸ್ಕೂಲ್ ಮತ್ತು ಕಾಲೇಜು ಆಪ್ ನರ್ಸಿಂಗ್‌ನ ಪ್ರಾಂಶುಪಾಲೆ ಪ್ರತಿಭಾ ಬ್ರಾಗ್ಸ್ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಸ್ವಾಗತಿಸಿ, ಕಾಲೇಜಿನ ಎನ್ನೆಸ್ಸೆಸ್ ಸಂಯೋಜಕ ಶಿವಪ್ರಸಾದ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X