ಪೊಲೀಸ್ ದೂರು ಪ್ರಾಧಿಕಾರದ ಸದಸ್ಯ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಜು.10: ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ನಾಗರಿಕ ಸೇವಾ ಸಮಾಜದಿಂದ ಒಬ್ಬ ಸದಸ್ಯರನ್ನು ನೇಮಕ ಮಾಡಬೇಕಾಗಿದ್ದು, ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಬಯೋಡೇಟಾ ಹಾಗೂ ಸಹಮತಿ ಪತ್ರ ಸಹಿತ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಜು.18ರ ಸಂಜೆ 5:30ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ ಇಲ್ಲಿನ ಆಡಳಿತ ಶಾಖೆ ದೂ.ಸಂ.0820-2574925ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
Next Story





